ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020
ರಾಜ್ಯದಲ್ಲಿ 46 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಿರುವ ಬಿಜೆಪಿ ಸರ್ಕಾರದ ಕ್ರಮ ಖಂಡಿಸಿ, ಸೋಷಿಯಲ್ ಡೆಮಾಕ್ರಟಿಕಲ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರಕರಣಗಳನ್ನು ಹಿಂಪಡೆದರೆ ಕ್ರಿಮಿನಲ್’ಗಳಿಗೆ ಪ್ರೋತ್ಸಾಹ ನೀಡಿದಂತೆ ಆಗಲಿದೆ. ಅಲ್ಲದೆ ನ್ಯಾಯಾಂಗ ವ್ಯವಸ್ಥೆಯನ್ನೆ ಅಪಹಾಸ್ಯ ಮಾಡಿದಂತಾಗುತ್ತದೆ. ಈ ಪ್ರಕರಣಗಳಲ್ಲಿ ಬಹುತೇಕವು ಕೊಲೆ ಯತ್ನ, ಮಾರಣಾಂತಿಕ ಹಲ್ಲೆ, ದೊಂಬಿ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಹಲವು ಪ್ರಕರಣಗಳಿವೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಸಲೀಂಖಾನ್, ಪ್ರಧಾನ ಕಾರ್ಯದರ್ಶಿ ಅಲ್ಲಾ ಬಖಷ್, ಕಾರ್ಯದರ್ಶಿ ಕಲೀಂ, ಜಿಲ್ಲಾ ಸಮಿತಿ ಸದಸ್ಯರಾ ಜಿಲಾನ್ ಖಾನ್, ಅಬ್ದುಲ್ ಮುಜೀಬ್, ಇಮ್ರಾನ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200