ಶಿವಮೊಗ್ಗಕ್ಕೆ ರಾಜ್ಯದಲ್ಲಿ ಎರಡನೇ ಬಹುಮಾನ, ಭದ್ರಾವತಿ, ಸೊರಬ, ಸಾಗರಕ್ಕೂ ಸಿಕ್ಕಿದೆ ಪ್ರಶಸ್ತಿ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 17 MARCH 2023

SHIMOGA : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ರಾಜ್ಯದಲ್ಲಿ ದ್ವಿತೀಯ ಬಹುಮಾನ (PRIZE) ಲಭಿಸಿದೆ. ತಾಲೂಕು ಪಂಚಾಯಿತಿ ವಿಭಾಗದಲ್ಲಿ ಭದ್ರಾವತಿ ತಾಲೂಕಿಗೆ ಮೂರನೇ ಸ್ಥಾನ ಲಭಿಸಿದೆ.

zilla-pachayath-shivamogga

2022 – 23ನೇ ಸಾಲಿನ ಮಹಾತ್ಮ ಗಾಂಧಿ ನೆರೇಗಾ ಯೋಜನೆಯ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ, ಭದ್ರಾವತಿ ತಾಲೂಕು ಪಂಚಾಯಿತಿಗೆ ಬಹುಮಾನ (PRIZE) ಲಭಿಸಿದೆ.

ಇನ್ನು, ಕೃಷಿ ಸ್ನೇಹಿ ಪಂಚಾಯತ್ ಪುರಸ್ಕಾರ ವಿಭಾಗದಲ್ಲಿ ಸೊರಬ ತಾಲೂಕಿನ ಕೃಷಿ ಇಲಾಖೆಗೆ ಅತ್ಯುತ್ತಮ ತಾಲೂಕು ಮಟ್ಟದ ಅರಣ್ಯ ಇಲಾಖೆ ಪ್ರಶಸ್ತಿ ಸಿಕ್ಕಿದೆ. ಜಲ ಸಂಜೀವಿನಿ ಪಂಚಾಯತ್ ಪುರಸ್ಕಾರ ವಿಭಾಗದಲ್ಲಿ ಸಾಗರ ತಾಲೂಕಿನ ಸೈದೂರು ಗ್ರಾಮ ಪಂಚಾಯಿತಿಗೆ ಪ್ರಶಸ್ತಿ ಲಭಿಸಿದೆ.

ಇದನ್ನೂ ಓದಿ – ಶಿವಮೊಗ್ಗದ ಲಕ್ಷ್ಮಿ ಟಾಕೀಸ್ ಇನ್ನು ನೆನಪಷ್ಟೇ, ಟಾಕೀಸ್ ಬಗ್ಗೆ ನಿಮಗೆಷ್ಟು ಗೊತ್ತು? ಮುಂದೇನಾಗುತ್ತೆ ಇಲ್ಲಿ?

ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಗಾಂಧಿ ಗ್ರಾಮ ಪುರಸ್ಕಾರ ಮತ್ತು ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್.ಡಿ.ಪ್ರಕಾಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಕೃಷಿ ಮೇಳ, ರೈತರಷ್ಟೆ ಅಲ್ಲ ಮಹಿಳೆಯರು, ಮಕ್ಕಳನ್ನು ಸೆಳೆಯುತ್ತಿವೆ ಸ್ಟಾಲ್ಸ್, ಹೇಗಿದೆ? ಏನೇನಿದೆ?

Leave a Comment