ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020
ಶಿವಮೊಗ್ಗ ತಾಲೂಕಿನಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿಯುವ ಹಂತಕ್ಕೆ ತಲುಪಿದೆ. ಈವರೆಗೂ 13 ಗ್ರಾಮ ಪಂಚಾಯಿತಿಗಳ ಫಲಿತಾಂಶ ಹೊರಬಿದ್ದಿದೆ.
ಮಧ್ಯಾಹ್ನದ ವೇಳೆಗೆ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದೆ. ಸುಮಾರು 150 ಅಭ್ಯರ್ಥಿಗಳ ಫಲಿತಾಂಶ ಹೊರಬಿದ್ದಿದೆ. ಎರೆಡನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಕೆಲವೇ ಹೊತ್ತಿನಲ್ಲಿ ಮತ ಎಣಿಕೆ ಪೂರ್ಣಗೊಳ್ಳಲಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಮತ ಎಣಿಕೆ ಆಗಿದೆ?
ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ ಪೈಕಿ 12 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಇನ್ನೂ 28 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ನಡೆಬೇಕಿದೆ.
ಕುತೂಹಲ, ಕಾತುರ, ಜನ ಸಂದಣಿ
ಮತ ಎಣಿಕೆ ಕೇಂದ್ರದ ಹೊರಗೆ ಅಭ್ಯರ್ಥಿಗಳ ಬೆಂಬಲಿಗರು, ಹಿತೈಷಿಗಳು ಸೇರಿದ್ದಾರೆ. ಜನ ದೊಡ್ಡ ಸಂಖ್ಯೆಯಲ್ಲಿ ಸೇರಿರುವುದರಿಂದ, ರಸ್ತೆಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ. ಮಹಾವೀರ ಸರ್ಕಲ್‍ನಿಂದ ಡಿವಿಎಸ್ ಕಾಲೇಜು ಸರ್ಕಲ್‍ವರೆಗೆ ವಾಹನ ಸಂಚಾರ ನಿರ್ಬಂಧಿಸಿ ಬ್ಯಾರಿಕೇಡ್ ಹಾಕಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು
ರಾತ್ರಿಯು ನಡೆಯಲಿದೆ ಕೌಂಟಿಂಗ್
ರಾತ್ರಿ ಬಹುಹೊತ್ತಿನವರೆಗೆ ಮತ ಎಣಿಕೆ ಕಾರ್ಯ ನಡೆಯುವ ಸಾದ್ಯತೆ ಇದೆ. ಹಾಗಾಗಿ ರಾತ್ರಿ ವೇಳೆ ಎಣಿಕೆಗೆ ಅನುಕೂಲವಾಗುಂತೆ ಲೈಟ್ ವ್ಯವಸ್ಥೆ ಮಾಡಲಾಗಿದೆ. ಇನ್ನು, ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200