ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳು ಇವತ್ತಿನಿಂದ ಪುನಾರಂಭವಾಗಲಿದೆ. ಎಲ್ಲಾ ಶಾಲೆ, ಕಾಲೇಜುಗಳ ಬಳಿ ನಿಷೇಧಾಜ್ಞೆ ಮುಂದುವರೆಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಈ ನಡುವೆ ಮೂರು ಕಾಲೇಜುಗಳಿಗೆ ಇವತ್ತು ಕೂಡ ರಜೆ ನೀಡಲಾಗಿದೆ.
ಹಿಜಾಬ್, ಕೇಸರಿ ಶಾಲೆ ವಿವಾದ ಹಿನ್ನೆಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇವತ್ತು ಕಾಲೇಜು ತರಗತಿಗಳು ಪುನಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾಲೇಜು ಆಡಳಿತ ಮಂಡಳಿ ಕೂಡ ಕಟ್ಟುನಿಟ್ಟು ಕ್ರಮ ಕೈಗೊಂಡಿದೆ.
ಶಾಲೆ, ಕಾಲೇಜು ಬಳಿ ನಿಷೇಧಾಜ್ಞೆ
ಶಿವಮೊಗ್ಗ ಜಿಲ್ಲೆಯಾದ್ಯಾಂತ ಎಲ್ಲಾ ಶಾಲೆ, ಕಾಲೇಜು ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಫೆ.19ರ ರಾತ್ರಿ 9 ಗಂಟೆವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶಿಸಿದ್ದಾರೆ. ಈ ಸಂದರ್ಭ ಶಾಲೆ, ಕಾಲೇಜು ಬಳಿ ಗುಂಪುಗೂಡುವನ್ನು ನಿಷೇಧಿಸಲಾಗಿದೆ.
ಮೂರು ಕಾಲೇಜಿಗೆ ಇವತ್ತೂ ರಜೆ
ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದ ಮೂರು ಕಾಲೇಜುಗಳಿಗೆ ಒಂದು ದಿನ ಹೆಚ್ಚುವರಿ ರಜೆ ಘೋಷಿಸಲಾಗಿದೆ. ಫೆ.16ರಂದು ಮೂರು ಕಾಲೇಜುಗಳಿಗೆ ರಜೆ ಇರಲಿದೆ. ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸೈನ್ಸ್ ಮೈದಾನದ ಪಿಯು ಕಾಲೇಜು, ಸಾಗರದ ಸರ್ಕಾರಿ ಪಿಯು ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ಸಿಟಿಯಲ್ಲಿ ಮತ್ತೆ ನಿಷೇಧಾಜ್ಞೆ, ಎಷ್ಟು ದಿನ? ಏನೆಲ್ಲ ನಿರ್ಬಂಧವಿದೆ?
ಇದನ್ನೂ ಓದಿ | ನಾಳೆಯಿಂದ ಕಾಲೇಜುಗಳು ಪುನಾರಂಭ, ಹೇಗಿದೆ ಸಿದ್ಧತೆ? ಎಷ್ಟಿದೆ ಬಂದೋಬಸ್ತ್?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422