ಪಂಜರ ಸೇರಿತು ಶಿವಮೊಗ್ಗಕ್ಕೆ ಆಗಮಿಸಿದ್ದ ಟಿ-55 ಯುದ್ಧ ಟ್ಯಾಂಕರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 AUGUST 2023

SHIMOGA : ನಗರಕ್ಕೆ ಆಗಮಿಸಿರುವ ಟಿ-55 ಯುದ್ಧ ಟ್ಯಾಂಕರ್‌ಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಟ್ಯಾಂಕರ್‌ (Battle Tanker) ಸುತ್ತಲು ಕಬ್ಬಿಣದ ಬೇಲಿ ಹಾಕಲಾಗಿದೆ. ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ಯುದ್ಧ ಟ್ಯಾಂಕರ್‌ (Battle Tanker) ಸ್ಮಾರಕ ನಿರ್ಮಾಣಕ್ಕೆ 1971ರ ಯುದ್ಧದಲ್ಲಿ ಪಾಲ್ಗೊಂಡಿದ್ದ ಟಿ-55 ಮಾದರಿಯ ಟ್ಯಾಂಕರ್‌ ತರಲಾಗಿದೆ. ವಿದ್ಯುತ್‌ ನಿಗಮದ ಕ್ವಾರ್ಟರ್ಸ್‌ನಲ್ಲಿ ಇದನ್ನು ಇರಿಸಲಾಗಿದೆ. ವಿಚಾರ ತಿಳಿದು ಹೆಚ್ಚಿನ ಸಂಖ್ಯೆ ಜನರು ಟ್ಯಾಂಕರ್‌ ವೀಕ್ಷಿಸಲು ಆಗಮಿಸುತ್ತಿದ್ದಾರೆ. ಹಾಗಾಗಿ ಟ್ಯಾಂಕರ್‌ನ ಸುರಕ್ಷತೆ ದೃಷ್ಟಿಯಿಂದ ಸುತ್ತಲು ಕಬ್ಬಿಣದ ಬೇಲಿ ನಿರ್ಮಿಸಲಾಗಿದೆ.

War-Tanker-in-Shimoga-MRS-Circle

ಹೇಗಿದೆ ರಕ್ಷಣೆ?

ಟ್ಯಾಂಕರ್‌ ನಿಲ್ಲಿಸಲು ಸಿಮೆಂಟ್‌ ಹಾಕಲಾಗಿದೆ. ಅದರ ಸುತ್ತಲು ಕಬ್ಬಿಣ ಚೈನ್‌ ಲಿಂಕ್‌ ಫೆನ್ಸ್‌ ಅಳವಡಿಸಲಾಗಿದೆ. ಬಿಸಿಲು, ಮಳೆಗೆ ಟ್ಯಾಂಕರ್‌ ತುಕ್ಕು ಹಿಡಿಯುವುದನ್ನು ತಪ್ಪಿಸಲು ಶೀಟ್‌ ಹಾಕಲಾಗಿದೆ. ಎಂಆರ್‌ಎಸ್‌ ಸರ್ಕಲ್‌ನಿಂದ ವಿದ್ಯುತ್‌ ಪ್ರಸರಣ ನಿಗಮದ ಕ್ವಾಟರ್ಸ್‌ ಒಳಗೆ ಟ್ಯಾಂಕರ್‌ ತರಲು ಕೌಂಪೌಡ್‌ ತೆರವು ಮಾಡಲಾಗಿತ್ತು. ಈಗ ಕಾಂಪೌಂಡ್‌ ಅನ್ನು ಪುನರ್‌ ನಿರ್ಮಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗಕ್ಕೆ ಭಾರತ – ಪಾಕ್‌ ಯುದ್ದದಲ್ಲಿ ಭಾಗಿಯಾದ ಟ್ಯಾಂಕರ್‌, ಸದ್ಯದಲ್ಲೇ ಬರುತ್ತೆ ಫೈಟರ್‌ ವಿಮಾನ, ಯಾಕೆ?

ಯುದ್ದ ವಿಮಾನವು ಬರಲಿದೆ

ಇನ್ನು, ಶಿವಮೊಗ್ಗದಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದರ ಬಿ.ವೈ.ರಾಘವೇಂದ್ರ, ‘ಯುದ್ದ ವಿಮಾನ ಒಂದನ್ನು ಕೇಳಿದ್ದೇವೆ. ಅದು ಕೂಡ ಸದ್ಯದಲ್ಲೇ ಅಗಮಿಸಲಿದೆ’ ಎಂದು ತಿಳಿಸಿದರು. ಸಂಸದ ರಾಘವೇಂದ್ರ ಹೇಳಿದ್ದೇನು? ಇಲ್ಲಿದೆ ಪೂರ್ತಿ ವಿಡಿಯೋ.

ಫೋಟೊಗಾಗಿ ಬರ್ತಿದ್ದಾರೆ ಜನ

ಯುದ್ಧ ಟ್ಯಾಂಕರ್‌ ಅನ್ನು ಸಮೀಪದಿಂದ ಕಾಣುವ ಕುತೂಹಲ, ಅದರ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಳ್ಳುವ ಆಸೆಯಿಂದ ಜನರು ಬರುತ್ತಿದ್ದಾರೆ. ಕ್ವಾರ್ಟರ್ಸ್‌ ಒಳಗೆ ಬಂದು ಟ್ಯಾಂಕರ್‌ ಸಮೀಪ ನಿಂತು ಫೋಟೊ ತೆಗೆಸಿಕೊಳ್ಳುತ್ತಿದ್ದಾರೆ. ಟ್ಯಾಂಕರ್‌ ಅನ್ನು ಹತ್ತಿರದಿಂದ ಕಂಡು ಖುಷಿ ಪಡುತ್ತಿದ್ದಾರೆ. ಎಂಆರ್‌ಎಸ್‌ ಸರ್ಕಲ್‌ನಲ್ಲಿ ಬಸ್ಸಿಗಾಗಿ ಕಾಯುವವರು ಕೂಡ ಟ್ಯಾಂಕರ್‌ ಅನ್ನು ಸಮೀಪದಿಂದ ಕಾಣಬಹುದಾಗಿದೆ. ವಿದ್ಯಾರ್ಥಿಗಳು ಕೌಂಪೌಂಡ್ ಬಳಿ ನಿಂತು ಟ್ಯಾಂಕರ್‌ ವೀಕ್ಷಿಸುತ್ತಿದ್ದಾರೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 14, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment