SHIVAMOGGA LIVE NEWS | 25 MARCH 2023
SHIMOGA : ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Security To Airport) ಬಿಗಿ ಭದ್ರತೆ ಒದಗಿಸಲಾಗಿದೆ. ಪ್ರಧಾನಿ ಮೋದಿ ಅವರು ಇವತ್ತು ಸಂಜೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಕೈಗಾರಿಕಾ ಭದ್ರತಾ ಪಡೆ ಜೊತೆಗೆ ಸ್ಥಳೀಯ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಮಾನ ನಿಲ್ದಾಣದ (Security To Airport) ಗೇಟ್ ಬಳಿ ವಾಹನಗಳ ನಿಲುಗಡೆಗೆ ಅವಕಾಶ ನೀಡುತ್ತಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪ್ರಧಾನಿ ವಿಮಾನ ಆಗಮನ
ಪ್ರಧಾನಿ ನರೇಂದ್ರ ಮೋದಿ ಅವರು ವಾಯು ಸೇನೆ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ದಾವಣಗೆರೆಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. ಇಲ್ಲಿಂದ ವಾಯು ಸೇನೆ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನಲೆ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.
ಇದನ್ನೂ ಓದಿ – GOOD NEWS | ಶಿವಮೊಗ್ಗದಿಂದ ವಿಮಾನ ಹಾರಾಟ ಶುರು, ಯಾವ ರೂಟ್? ಎಷ್ಟಿರುತ್ತೆ ಟಿಕೆಟ್ ರೇಟ್?