ರಾಗಿಗುಡ್ಡದಲ್ಲಿ ಕಲ್ಲು ತೂರಿ ಅಡಗಿ ಕುಳಿತಿದ್ದವರನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದ ಪೊಲೀಸರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 OCTOBER 2023

SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣ ಸಂಬಂಧ ಏಳು ಮಂದಿಯನ್ನು ಪೊಲೀಸರು ವಶಕ್ಕೆ (Taken To Custody) ಪಡೆದಿದ್ದಾರೆ. ಕಲ್ಲು ತೂರಾಟ ನಡೆಸಿದ ಬಳಿಕ ದುಷ್ಕರ್ಮಿಗಳು ಮನೆಯೊಳಗೆ ಅವಿತಿದ್ದರು ಎಂದು ತಿಳಿದು ಬಂದಿದೆ. ಕಲ್ಲು ತೂರಿದ್ದವರನ್ನು ಪತ್ತೆ ಹಚ್ಚಿದ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ, 144 ಸೆಕ್ಷನ್‌ ಜಾರಿ

ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭ ಇಂದು ಸಂಜೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಸಂಭವಿಸಿತ್ತು. ಈ ಸಂದರ್ಭ ಪೊಲೀಸರು ಗುಂಪು ಚದುರಿಸಲು ಯತ್ನಿಸಿದರು. ಆಗ ದುಷ್ಕರ್ಮಿಗಳು ಪೊಲೀಸರ ಮೇಲೆಯೆ ಕಲ್ಲು ತೂರಿದ್ದಾರೆ. ಬಂದೋಬಸ್ತ್‌ಗೆ ತೆರಳಿದ್ದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರತ್ತಲು ಕೆಲವು ದುಷ್ಕರ್ಮಿಗಳು ಕಲ್ಲು ತೂರಲು ಪ್ರಯತ್ನಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ.

ಇದನ್ನೂ ಓದಿ – ರಾಗಿಗುಡ್ಡದಲ್ಲಿ ಬಿಗಿ ಬಂದೋಬಸ್ತ್‌, RAF ಸಿಬ್ಬಂದಿಯಿಂದ ರೂಟ್‌ ಮಾರ್ಚ್‌

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment