ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬ ಕರೋನ ಸೋಂಕಿತ ಸಾವು, ಏಳಕ್ಕೆ ಏರಿದ ಸಾವಿನ ಸಂಖ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020

ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಿಗೆ ಸೋಂಕಿತರು ಮೃತರಾಗುತ್ತಿರುವ ಸಂಖ್ಯೆಯು ಏರಿಕೆಯಾಗುತ್ತಿದೆ. ಕರೋನಾಗೆ ತುತ್ತಾಗಿದ್ದ ವ್ಯಕ್ತಿಯೊಬ್ಬರು ಗುರುವಾರ ಮೃತರಾಗಿದ್ದು ಒಟ್ಟು ಸೋಂಕಿತರ ಕೊನೆಯುಸಿರೆಳೆದ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Mc Gann Hospital 2 1 1 1

ಈಗ ಮೃತರಾಗಿದ್ದು ಯಾರು?

ಶಿಕಾರಿಪುರ ತಾಲೂಕಿನ ಖವಾಸಪುರ ಗ್ರಾಮದ ವೃದ್ಧರೊಬ್ಬರಿಗೆ ಕರೋನಾ ಸೋಂಕಿಗೆ ತುತ್ತಾಗಿದ್ದರು. ಇವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದ ಇವರು ಮೊದಲು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕರೋನ ಪಾಸಿಟಿವ್ ಎಂದು ತಿಳಿಯುತ್ತಿದ್ದಂತೆ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ವೃದ್ಧ ಮೃತರಾಗಿದ್ದಾರೆ. ಜೂ 22ರಂದು ಮೃತರಾದ ವೃದ್ಧೆಯ ಪ್ರಾಥಮಿಕ ಸಂಪರ್ಕದಿಂದ ಇವರಿಗೆ ಸೋಂಕು ತಗುಲಿತ್ತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment