ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 30 ಡಿಸೆಂಬರ್ 2019
ಶಿವಮೊಗ್ಗದ ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಶಕ್ತಿ ದೇವತೆಗಳ ಸಾಮಾಗಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿವಮೊಗ್ಗ ನಗರದ ವಿವಿಧೆಡೆಯಿಂದ ಸುಮಾರು 50ಕ್ಕೂ ಹೆಚ್ಚು ದೇವತೆಗಳ ಉತ್ಸವ ಮೂರ್ತಿಗಳನ್ನು ಒಂದೆಡೆ ಕಣ್ತುಂಬಿಕೊಳ್ಳುವ ಅವಕಾಶ ಲಭ್ಯವಾಯಿತು.
ಭಾರೀ ಸಂಖ್ಯೆಯಲ್ಲಿ ಬಂದ ಭಕ್ತರು, ದೇವರಿಗೆ ಪೂಜೆ ಸಲ್ಲಿಸಿದರು. ಮಹಿಳೆಯರು ಮಡಿಲಕ್ಕಿಯನ್ನು ಅರ್ಪಿಸಿ ಪುನೀತರಾದರು.
ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ವಿಶ್ವವ ಹಿಂದೂ ಪರಿಷತ್ ಪ್ರಮುಖ ದೀನದಯಾಳು, ಎಲ್ಲ ದೇವರುಗಳ ಸಮಾಗಮವಾಗಿದೆ. ಭಕ್ತರು ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಧಾರ್ಮಿಕ ಜಾಗೃತಿ ಮತ್ತು ಸಾಮಾಜಿಕ ಸಾಮರಸ್ಯದ ಹಿನ್ನೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಪೇಜಾವರ ಶ್ರೀಗಳು ಸಂಭ್ರಮಿಸಿದ್ದರು
ವಿಶ್ವ ಹಿಂದೂ ಪರಿಷತ್ ವತಿಯಿಂದ ಶಿವಮೊಗ್ಗದಲ್ಲಿ 20 ವರ್ಷದಿಂದ ನಡೆಯುತ್ತಿರುವ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮವು ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರನ್ನು ಬಹುವಾಗಿ ಸೆಳೆದಿತ್ತು. ಇದೇ ಕಾರಣಕ್ಕೆ ಹಲವು ಧಾರ್ಮಿಕ ಸಭೆಗಳಲ್ಲಿ ಸ್ವಾಮೀಜಿ ಅವರು ಈ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿದ್ದರು ಎಂದು ಸ್ಮರಿಸುತ್ತಾರೆ ವಿಶ್ವ ಹಿಂದೂ ಪರಿಷತ್ ಮುಖಂಡ ದೀನದಯಾಳ್.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422