ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮತ್ತು ಸಂಚಲನ ಮೂಡಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಆಯೋಜಿಸಿರುವ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಭಾವೈಕ್ಯತ ಸಮ್ಮೇಳನದಲ್ಲಿ ಭಾಗಿಯಾಗಿ ಶಾಮನೂರು ಶಿವಶಂಕರಪ್ಪ ಮಾತನಾಡಿದರು.
ಶಾಮನೂರು ಹೇಳಿದ್ದೇನು?
‘ಬಿ.ವೈ.ರಾಘವೇಂದ್ರ ಅವರಂತಹ ಸಂಸತ್ ಸದಸ್ಯರನ್ನು ಪಡೆದಿರುವ ನೀವೆ ಧನ್ಯರು. ತಮ್ಮ ಕ್ಷೇತ್ರದಲ್ಲಿ ಯಾವೆಲ್ಲ ಕೆಲಸ ಆಗಬೇಕು ಅನ್ನುವುದನ್ನು ನೋಡಿಕೊಂಡು, ಆ ಎಲ್ಲ ಕೆಲಸ ಮಾಡಿದ್ದಾರೆ. ಆಗದಿರುವ ಕೆಲಸವನ್ನೂ ಆಗುವಂತೆ ಮಾಡಿದ್ದಾರೆ. ಅಂತಹ ಒಳ್ಳೆಯ ವ್ಯಕ್ತಿಯನ್ನು ಸಂಸತ್ ಸದಸ್ಯರನ್ನಾಗಿ ಆಯ್ಕೆ ಮಾಡಿಕೊಂಡಿದ್ದೀರ. ಇನ್ನೆರಡು ತಿಂಗಳಲ್ಲಿ ಸಂಸತ್ ಚುನಾವಣೆ ಬರಲಿದೆ. ರಾಘವೇಂದ್ರ ಅವರನ್ನು ಹೊರತು ಬೇರೆಯವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅವರನ್ನು ಮತ್ತೆ ಗೆಲ್ಲಿಸುವಂತಹ ದೊಡ್ಡ ಕರ್ತವ್ಯ ನಿಮ್ಮದಾಗಿದೆ. ಜನರಿಗೆ ಮತ್ತು ಕ್ಷೇತ್ರದಲ್ಲಿ ಕೆಲಸ ಮಾಡುವವರನ್ನು ಆರಿಸುವುದು ಜನರ ಕರ್ತವ್ಯʼ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಅಮೃತಮಯಿ, ವಿವಿಧ ವಿಷಯಗಳ ಸಂವಾದ, ಸಂಜೆ ಅದ್ಧೂರಿ ಅಭಿನಂದನಾ ಸಮಾರಂಭ