ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 SEPTEMBER 2023
SHIMOGA : ಭದ್ರಾ ಜಲಾಶಯದಿಂದ (Bhadra Dam) ನೂರು ದಿನ ನೀರು ಹರಿಸುವ ನಿರ್ಧಾರ ಪುನರ್ ಪರಿಶೀಲಿಸಬೇಕು. ಮಳೆ ಇಲ್ಲದೆ ರೈತರು ಸಂಕಷ್ಟಕ್ಕೀಡಾಗಿದ್ದು ಬರಗಾಲ ಘೋಷಣೆ ಮಾಡಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್ ಗೌಡ ಪ್ರತಿಭಟನೆ (Protest) ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗದ ಉದ್ಯಮಿಗೆ ಕರ್ನಾಟಕ ಸಾಧಕ ಪ್ರಶಸ್ತಿ
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಶಶಿಕುಮಾರ್ ಗೌಡ, ಭದ್ರಾ ಜಲಾಶಯದಿಂದ 100 ದಿನ ನೀರು ಹರಿಸಲು ನಿರ್ಧರಿಸಲಾಗಿದೆ. ಇದರಿಂದ ಅಚ್ಚುಕಟ್ಟು ಭಾಗದ ರೈತರಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ನಿರ್ಧಾರ ಪುನರ್ ಪರಿಶೀಲಿಸಬೇಕು. ಇನ್ನು, ಮಳೆ ಇಲ್ಲದೆ ಬೆಳೆ ನಷ್ಟವಾಗಿದೆ. ಆದ್ದರಿಂದ ಭತ್ತ ಬೆಳೆದ ರೈತರಿಗೆ ಪ್ರತಿ ಎಕರೆಗೆ 30 ಸಾವಿರ ರೂ., ಮೆಕ್ಕೆಜೋಳಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವೆಂಕಟೇಶ್ ಇದ್ದರು.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





