SHIVAMOGGA LIVE NEWS | 15 MARCH 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಮೂಲ ಕಾಂಗ್ರೆಸಿಗರ ನಿರ್ಲಕ್ಷ ಖಂಡಿಸಿ, ಶಿಕಾರಿಪುರ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು. ಇದೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಿಕಾರಿಪುರದಲ್ಲಿ ಮೂಲ ಕಾಂಗ್ರೆಸಿಗರನ್ನು ನಿರ್ಲಕ್ಷಿಸಲಾಗಿದೆ. ನಾಗರಾಜ ಗೌಡ ಬಣದವರಿಗೆ ಮಾತ್ರ ಪದಾಧಿಕಾರಿ ಹುದ್ದೆಗಳನ್ನು ನೀಡಲಾಗುತ್ತಿದೆ ಎಂದು ಆಪಾದಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಂದಾಗಿಯೆ ಈ ಬೆಳವಣಿಗೆಗಳು ನಡೆಯುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಗರಾಜಗೌಡ ಸ್ಪರ್ಧಿಸಿ ಸೋತಿದ್ದರು. ಚುನಾವಣೆ ಬಳಿಕ ನಾಗರಾಜ ಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಅವರ ಬೆಂಬಲಿಗರಿಗೆ ಪಕ್ಷದಲ್ಲಿ ಸ್ಥಾನಮಾನ ನೀಡಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಗೋಣಿ ಮಾಲೇಶ್ ಬೆಂಬಲಿಗರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಗೀತಾ ಶಿವರಾಜ್‌ಕುಮಾರ್ ಶಿವಮೊಗ್ಗ ಭೇಟಿಗೆ ದಿನಾಂಕ ಫಿಕ್ಸ್, ಹೇಗಿರುತ್ತೆ ಪ್ರಚಾರ? ಸಚಿವ ಮಧು ಹೇಳಿದ್ದೇನು?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






