ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 7 DECEMBER 2020
ಗಲಭೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಜಿಲ್ಲಾಡಳಿತ ವಿಧಿಸಿರುವ ನಿಷೆಧಾಜ್ಞೆಯನ್ನೆ ಮತ್ತೆರಡು ದಿನ ವಿಸ್ತರಿಸಲಾಗಿದೆ. ಇನ್ನು, ಎರಡನೇ ಬಾರಿ ನಿಷೇಧಾಜ್ಞೆಯನ್ನು ವಿಸ್ತರಿಸಿರುವುದಕ್ಕೆ ನಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಶಿವಮೊಗ್ಗ ಸಿಟಿಯಲ್ಲಿ ನಿಷೇಧಾಜ್ಞೆಯನ್ನು ಡಿಸೆಂಬರ್ 9ರ ಬೆಳಗ್ಗೆ 10 ಗಂಟೆವರೆಗೆ ವಿಸ್ತರಿಸಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 7ರ ಬೆಳಗ್ಗೆ 10 ಗಂಟೆವರೆಗೆ ನಿಷೆಧಾಜ್ಞೆ ಇತ್ತು. ಇದನ್ನು ಮತ್ತೆರಡು ದಿನಕ್ಕೆ ವಿಸ್ತರಿಸಲಾಗಿದೆ.
ಜನರು, ವ್ಯಾಪಾರಿಗಳ ಆಕ್ರೋಶ
ನಿಷೆಧಾಜ್ಞೆಯನ್ನು ವಿಸ್ತರಿಸಿರುವ ವಿಚಾರವನ್ನು ಅಧಿಕಾರಿಗಳು ತಡವಾಗಿ ಪ್ರಕಟಿಸುತ್ತಿರುವುದು ಜನರು ಮತ್ತು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದಿನ ದಿನವೇ ನಿಷೇಧಾಜ್ಞೆ ವಿಚಾರ ತಿಳಿಸಿದರೆ, ಮರುದಿನದ ವ್ಯಾಪಾರ, ವಹಿವಾಟು ಕುರಿತು ನಿರ್ಧಾರ ಕೈಗೊಳ್ಳಲು ಅವಕಾಶವಾಗಲಿದೆ. ಶಿವಮೊಗ್ಗದಲ್ಲಿ ವಾತಾವರಣ ಶಾಂತವಾಗಿದ್ದರೂ, ನಿಷೇಧಾಜ್ಞೆ ವಿಸ್ತರಿಸಲಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟಿಗೆ ಭಾರಿ ಸಮಸ್ಯೆಯಾಗುತ್ತಿದೆ.
ಕಾಂಗ್ರೆಸ್‍ನಿಂದ ಡಿಸಿಗೆ ಮನವಿ
ನಿಷೇಧಾಜ್ಞೆಯನ್ನು ಬಹಳ ತಡವಾಗಿ ಪ್ರಕಟಿಸುತ್ತಿರುವುದಕ್ಕೆ ಶಿವಮೊಗ್ಗ ಕಾಂಗ್ರೆಸ್ ಕಾರ್ಪೊರೇಟರ್‍ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422