ಶಿವಮೊಗ್ಗದ ಅಡಿಷನಲ್‌ ಎಸ್‌.ಪಿ ವರ್ಗಾವಣೆ, ಎಲ್ಲಿಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಹೆಚ್ಚುವರಿ ಪೊಲೀಸ್‌ ಅಧೀಕ್ಷಕ (Additional SP) ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರನ್ನು ವರ್ಗಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಹುದ್ದೆಗೆ ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶಿಸಿದೆ.

ಇದನ್ನೂ ಓದಿ » ಮಲೆನಾಡು ಭಾಗದಲ್ಲಿ ಇದೇ ಮೊದಲು, ನಂಜಪ್ಪ ಆಸ್ಪತ್ರೆಯಲ್ಲಿ ಅಪರೂಪದ ಆಪರೇಷನ್‌, ಒಂದೇ ದಿನಕ್ಕೆ ರೋಗಿ ಗುಣ

ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸರ್ಕಾರ ಯಾರನ್ನೂ ನೇಮಕ ಮಾಡಿಲ್ಲ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಹುದ್ದೆಗಳಿವೆ. ಈಗ ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರ ವರ್ಗಾವಣೆಯಿಂದ ಒಂದು ಸ್ಥಾನ ಖಾಲಿಯಾಗಿದೆ.

Additional-SP-Anil-Kumar-Bhoomareddy.

ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರು 1994ರಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಇಲಾಖೆಗೆ ಸೇರಿದ್ದರು. ಶಿವಮೊಗ್ಗ ಸೇರಿದಂತೆ ವಿವಿಧೆಡೆ ಪಿಎಸ್‌ಐ, ಇನ್ಸ್‌ಪೆಕ್ಟರ್‌, ಡಿವೈಎಸ್‌ಪಿ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. 2023ರ ಜನವರಿಯಲ್ಲಿ ಶಿವಮೊಗ್ಗದ ಹೆಚ್ಚುವರಿ ರಕ್ಷಣಾಧಿಕಾರಿ ಆಗಿ ನೇಮಕವಾಗಿದ್ದರು. ಪೊಲೀಸ್‌ ಇಲಾಖೆಯಲ್ಲಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. ಇವರ ಸೇವೆ ಗುರುತಿಸಿ 2024ರಲ್ಲಿ ರಾಷ್ಟ್ರಪತಿ ಪದಕ ನೀಡಲಾಗಿದೆ.

June-2025-Report-Shivamogga-Live-New-New.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment