SHIVAMOGGA LIVE NEWS
SHIMOGA| ಸೋಗಾನೆಯಲ್ಲಿ ವಿಮಾನ ನಿಲ್ದಾಣದ ರನ್ ವೇ, ಟರ್ಮಿನಲ್ ಕಟ್ಟಡ, ವಿಮಾನಸಂಚಾರ ನಿಯಂತ್ರಣ ಘಟಕ ಸೇರಿದಂತೆ ಅನೇಕ ಕಾಮಗಾರಿಗಳು ಭರದಿಂದ ಸಾಗಿದ್ದು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಅಂತಿಮ ಹಂತದ ಕಾಮಗಾರಿ ಪ್ರಗತಿಯಲ್ಲಿದೆ. ಈ ಎಲ್ಲಾ ಕಾಮಗಾರಿಗಳು ನವೆಂಬರ್ ತಿಂಗಳ ಕೊನೆಯ ವೇಳೆಗೆ ಪೂರ್ಣಗೊಂಡು ವಿಮಾನ (FLIGHT) ನಿಲ್ದಾಣ ಲೋಕಾರ್ಪಣೆಗೆ ಸರ್ವ ಸನ್ನದ್ಧಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.
ಅವರು ಇಂದು ಸೋಗಾನೆ ವಿಮಾನ (FLIGHT) ನಿಲ್ದಾಣಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಪರ ಕಾರ್ಯದರ್ಶಿ ಉಷಾ ಪಾಧಿ, ಗೌರವ ಗುಪ್ತಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವ ಕುಮಾರ್ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯ ಮಟ್ಟದ ತಂತ್ರಜ್ಞರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಯಾವುದೇ ಒಂದು ರಾಜ್ಯ, ಜಿಲ್ಲೆ, ಸಂಸ್ಥೆ ಅಥವಾ ವ್ಯವಸ್ಥೆ ನಿರೀಕ್ಷಿತ ಪ್ರಗತಿ ಸಾಧಿಸಲು ಮೂಲ ಸೌಕರ್ಯ ಇರಬೇಕು. ಕನಸಿನ ಯೋಜನೆಯ ಅನುಷ್ಠಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸತತ ಪರಿಶ್ರಮ, ಸಂಕಲ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರವು ಸ್ಮರಣೀಯ ಎಂದರು.
ಪ್ರಧಾನ ಮಂತ್ರಿ ಸಮಯ ನಿಗದಿ FLIGHT
ವಿಮಾನ ನಿಲ್ದಾಣದ ವ್ಯವಸ್ಥಿತ ನಿರ್ವಹಣೆ, ಸಂಚಾರ ಸಂಪರ್ಕ ಮತ್ತು ಉಸ್ತುವಾರಿ ಕಾರ್ಯಗಳ ಕುರಿತು ಗಮನಹರಿಸಬೇಕಾದ ಅಗತ್ಯವಿದೆ. ನಿಲ್ದಾಣದ ನಿರ್ವಹಣೆ ಕುರಿತು ಉನ್ನತ ಮಟ್ಟದ ಅಧಿಕಾರಿಗಳು ಸಭೆ ಸೇರಿ, ನಿರ್ಣಯ ಕೈಗೊಂಡು ಮುಂದಿನ ಕ್ರಮಗಳಿಗೆ ಅನುವು ಮಾಡಿಕೊಡುವಂತೆ ಗೌರವಗುಪ್ತಾ ಅವರಿಗೆ ರಾಘವೇಂದ್ರ ಅವರು ಮನವಿ ಮಾಡಿದರು. ನಿಲ್ದಾಣದ ಉದ್ಘಾಟನೆಗೆ ಜನವರಿ ತಿಂಗಳೊಳಗಾಗಿ ಪ್ರಧಾನ ಮಂತ್ರಿ ಅವರ ಸಮಯವನ್ನು ನಿಗದಿಗೊಳಿಸಿಕೊಡುವಂತೆ ರಾಜ್ಯ ಸರ್ಕಾರದ ವತಿಯಿಂದ ಕೋರಲಾಗುವುದು ಎಂದರು.
ಶಿರಡಿಗೆ ಅಧಿಕಾರಿಗಳ ತಂಡ FLIGHT
ಶಿವಮೊಗ್ಗ-ಬೆಂಗಳೂರು ಅಲ್ಲದೆ ನೆರೆ ರಾಜ್ಯಗಳ ಹಲವು ಪ್ರಮುಖ ನಗರಗಳ ಸಂಪರ್ಕ ಹಾಗೂ ಸಂಚಾರಕ್ಕೆ ಕ್ರಮ ವಹಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಮನವಿ ಮಾಡಲಾಗಿದೆ. ಅಲ್ಲದೇ ರಾಜ್ಯದ ಉನ್ನತ ಅಧಿಕಾರಿಗಳ ತಂಡ ಸದ್ಯದಲ್ಲಿ ಮಹಾರಾಷ್ಟ್ರದ ಶಿರಡಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ ಎಂದರು.
ಸರಕು ಸಾಗಣೆಗೆ ಅನುಕೂಲ
ಈಗಾಗಲೇ ಗತಿಶಕ್ತಿ ಯೋಜನೆಯಡಿ ಕೇಂದ್ರ ಸರ್ಕಾರ 65 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದೆ ಜಿಲ್ಲೆಯಲ್ಲಿ ಶೀಥಲೀಕರಣ ಘಟಕಗಳು, ಗೋದಾಮುಗಳು, ಕಿರು ಉದ್ಯಮ ಘಟಕಗಳ ಆರಂಭದಿಂದಾಗಿ ಸರಕು ಸಾಗಾಟಕ್ಕೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಬ್ರಿಗೇಡಿಯರ್ ಪೂರ್ವ ಮಠ್, ರಾಜೀವ್ ಕುಮಾರ್ ರೈ, ಹೆಪ್ಸಿಬಾ ರಾಣಿ ಕೊರ್ಲಪಾಟಿ, ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿ ಹೆಚ್.ಆರ್.ರಾಜಪ್ಪ, ರೈಟ್ಸ್ ಸಂಸ್ಥೆಯ ಇಂಜಿನಿಯರ್ ರವಿ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಕಾಂತರಾಜ್, ಸಂಪತ್ ಕುಮಾರ್ ಸೇರಿದಂತೆ ಅಧಿಕಾರಿಗಳು ಹಾಗೂ ವಿಮಾನಯಾನ ಸಂಸ್ಥೆಯ ತಂತ್ರಜ್ಞರು, ಗುತ್ತಿಗೆದಾರರು ಉಪಸ್ಥಿತರಿದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ದಸರಾ ಹಿನ್ನೆಲೆ, ಶಿವಮೊಗ್ಗದ 4 ರೈಲುಗಳಲ್ಲಿ ತಾತ್ಕಾಲಿಕವಾಗಿ ಬೋಗಿಗಳ ಹೆಚ್ಚಳ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200