SHIVAMOGGA LIVE NEWS | 16 FEBRURARY 2023
SHIMOGA : ಸೋಗಾನೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ವಿಮಾನ ನಿಲ್ದಾಣಕ್ಕೆ ಇನ್ನು ಎರಡು ವಾರ ಕಾಲ ಸಮಯ ಅತ್ಯಂತ ಮಹತ್ವದ್ದಾಗಿದೆ. ಲೈಸೆನ್ಸ್ (Licence) ನೀಡುವ ಪ್ರಕ್ರಿಯೆ ಚಾಲನೆಯಲ್ಲಿದೆ. ಇದಕ್ಕಾಗಿ ಅಧಿಕಾರಿಗಳ ತಂಡ ವಿಮಾನ ನಿಲ್ದಾಣಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಕಳೆದ ವಾರ ವಿಮಾನಯಾನ ಪ್ರಾಧಿಕಾರದ (ಡಿಜಿಸಿಎ) ಅಧಿಕಾರಿಗಳ ತಂಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿತ್ತು. 75 ಪ್ರಮುಖ ವಿಚಾರಗಳ ಕುರಿತು ಪ್ರಶ್ನಿಸಿದ್ದಾರೆ. ಲೈಸೆನ್ಸ್ (Licence) ಪಡೆಯಲು ಈ ವಿಚಾರಗಳು ಅತ್ಯಂತ ಪ್ರಮುಖದ್ದಾಗಿದೆ ಎಂದು ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇನ್ನೆರಡು ವಾರ ಮಹತ್ವದ್ದು
ಈಗಾಗಲೇ ಮಲ್ಟಿ ಡಿಸಿಪ್ಲಿನರಿ ಕಮಿಟಿ, ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ, ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಸೇರಿದಂತೆ ವಿವಿಧ ತಜ್ಞರ ತಂಡಗಳು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ವಿಮಾನ ನಿಲ್ದಾಣಕ್ಕೆ ಡಿಜಿಸಿಎ ಅಧಿಕಾರಿಗಳು ಪುನಃ ಭೇಟಿ ನೀಡಲಿದ್ದಾರೆ. ನಾಳೆ ಸಂಜೆಯೊಳಗೆ ಲೈಸೆನ್ಸ್ ವಿಚಾರ ನಿರ್ಧಾರವಾಗುವ ಸಾಧ್ಯತೆ ಇದೆ ಎಂದು ಸಂಸದ ರಾಘವೇಂದ್ರ ಹೇಳಿದರು.
ಮುಂಬೈ, ಗೋವಾ ಬಸ್ ಲೆಕ್ಕಾಚಾರ
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲು ಇಂಡಿಗೋ ಮತ್ತು ಸ್ಟಾರ್ ಏರ್ ಲೈನ್ಸ್ ಸಂಸ್ಥೆಗಳು ಮುಂದೆ ಬಂದಿವೆ. ಶಿವಮೊಗ್ಗದಿಂದ ಮುಂಬೈ, ಗೋವಾ ಸೇರಿದಂತೆ ವಿವಿಧೆಡೆ ನಿತ್ಯ ಎಷ್ಟು ಬಸ್ ಸಂಚರಿಸುತ್ತಿವೆ. ಎಷ್ಟು ಪ್ರಯಾಣಿಕರು ಎಲ್ಲಿಗೆಲ್ಲ ಸಂಚರಿಸುತ್ತಿದ್ದಾರೆ ಎಂಬುದರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದರ ಆಧಾರದಲ್ಲಿ ವಿಮಾನಯಾನ ಸೇವೆ ಆರಂಭವಾಗಲಿದೆ. ವಿಮಾನ ನಿಲ್ದಾಣ ಉದ್ಘಾಟನೆಯಾಗಿ 15 ದಿನದೊಳಗೆ ವಿಮಾನ ಹಾರಾಟ ಶುರುವಾಗುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿಯದ್ದೇ ಮೊದಲ ವಿಮಾನ
ಫೆ.27ರಂದು ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅವತ್ತು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದ ಮೂಲಕವೇ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅವರ ವಿಮಾನವೆ ಮೊದಲು ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯಡಿಯೂರಪ್ಪ ತುರ್ತು ಪತ್ರಿಕಾಗೋಷ್ಠಿ, ವಿಮಾನ ನಿಲ್ದಾಣದ ಹೆಸರು ಘೋಷಣೆ, ಯಾರ ಹೆಸರು ಪ್ರಕಟಿಸಿದರು?