ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕರೋನ ಸೋಂಕಿತರ ಚಿಕಿತ್ಸೆಗೆ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಹಲವು ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯ ಸ್ಯಾಟಿಲೈಟ್ ಕ್ಯಾಂಪಸ್ ಸಜ್ಜು
ಮೆಗ್ಗಾನ್ ಅಸ್ಪತ್ರೆಯಲ್ಲಿ ಪ್ರಸ್ತುತ 150 ಹಾಸಿಗೆ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ. ಗಾಜನೂರಿನಲ್ಲಿ ಮೊರಾರ್ಜಿ ದೇಸಾಯಿ ಹಾಸ್ಟೆಲ್‍ನಲ್ಲಿ 190 ಬೆಡ್ ಹಾಗೂ ಭದ್ರಾವತಿ ವಿಎಸ್‍ಐಎಲ್‍ನಲ್ಲಿ 50 ಬೆಡ್ ಸೌಲಭ್ಯ ಸಜ್ಜುಗೊಳಿಸಲಾಗುತ್ತಿದೆ. 23 ಕೋವಿಡ್ ಕೇರ್ ಸೆಂಟರ್‍ಗಳನ್ನು ಗುರುತಿಸಲಾಗಿದೆ. ರೋಗ ಲಕ್ಷಣಗಳಿಲ್ಲದ ಕರೋನಾ ಪಾಸಿಟಿವ್ ವ್ಯಕ್ತಿಗಳಿಗಾಗಿ ಎರಡು ತಾಲೂಕುಗಳಲ್ಲಿ ಮೆಗ್ಗಾನ್ ಆಸ್ಪತ್ರೆಯ ಸ್ಯಾಟಲೈಟ್ ಕ್ಯಾಂಪಸ್ ಸಜ್ಜುಗೊಳಿಸಲಾಗಿದೆ ಎಂದು ಹೇಳಿದರು.
24 ರಿಂದ 34 ಗಂಟೆಯೊಳಗೆ ರಿಪೋರ್ಟ್
ಜಿಲ್ಲೆಯಲ್ಲಿರುವ ಎರಡು ಪ್ರಯೋಗಾಲಯಗಳಲ್ಲಿ 24 ರಿಂದ 32 ಗಂಟೆಯ ಒಳಗಾಗಿ ವರದಿ ಬರುತ್ತಿದೆ. ಪ್ರತಿ ದಿನ ಸರಾಸರಿ 450 ಸ್ಯಾಂಪಲ್ ಪರೀಕ್ಷೆ ನಡೆಸಲಾಗುತ್ತಿದೆ. ಮನೆ ಕ್ವಾರೆಂಟೈನ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಎಫ್‍ಐಆರ್ ದಾಖಲಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಭಾನುವಾರ ಆವಶ್ಯಕ ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಲಾಕ್‍ಡೌನ್ ಇರಲಿದೆ. ಪ್ರತಿದಿನ ರಾತ್ರಿ 8 ಗಂಟೆಯಿಂದ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸೋಂಕಿತರ ಅಂತ್ಯಕ್ರಿಯೆ ಕಟ್ಟುನಿಟ್ಟು
ಕರೋನಾ ಪ್ರಕರಣಗಳಲ್ಲಿ ಸಂಭವಿಸುವ ಸಾವಿನ ಸಂದರ್ಭದಲ್ಲಿ ಅಂತ್ಯಕ್ರಿಯೆಯನ್ನು ಉಪ ತಹಶೀಲ್ದಾರ್ ಹಾಗೂ ಮೆಡಿಕಲ್ ಆಫೀಸರ್ ನೇತೃತ್ವದಲ್ಲಿ ನಡೆಸಲು ಸೂಚನೆ ನೀಡಲಾಗಿದೆ. ಸರ್ಕಾರದ ಮಾರ್ಗಸೂಚಿ ಪಾಲನೆಯಲ್ಲಿ ಲೋಪ ಕಂಡು ಬಂದರೆ ಈ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]