ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 30 JUNE 2023
SHIMOGA : ಸೋಗಾನೆ ವಿಮಾನ ನಿಲ್ದಾಣದಿಂದ ವಿಮಾನ (Flight) ಹಾರಾಟಕ್ಕೆ ದಿನಾಂಕ ನಿಗದಿಯಾಗಿದೆ. ವಿಮಾನದ ಸಮಯವು ಬಹುತೇಕ ಫಿಕ್ಸ್ ಆಗಿದೆ. ಇನ್ನೊಂದೆಡೆ ಇಲ್ಲಿ ಏರೋ ಶೋ ನಡೆಸುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ – ಬೆಂಗಳೂರು ಮಾರ್ಗದಲ್ಲಿ ಆ.11ರಿಂದ ವಿಮಾನ (Flight) ಹಾರಾಟ ಆರಂಭವಾಗಲಿದೆ. ಇದಕ್ಕೆ ಪೂರಕವಾಗಿ ಇಂಡಿಗೋ ಸಂಸ್ಥೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಚಟುವಟಿಕೆ ಆರಂಭಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ – GOOD NEWS – ಶಿವಮೊಗ್ಗದಿಂದ 4 ಹೊಸ ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಅನುಮತಿ, ಯಾವ್ಯಾವ ಮಾರ್ಗಗಳು?
ಶಿವಮೊಗ್ಗ – ಬೆಂಗಳೂರು ಟೈಮಿಂಗ್ ಏನು?
ಆ.11ರಿಂದ ಶಿವಮೊಗ್ಗ – ಬೆಂಗಳೂರು ಮಧ್ಯೆ ವಿಮಾನ ಹಾರಾಟ ಆರಂಭವಾಗಲಿದೆ. ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ಶಿವಮೊಗ್ಗ ತಲುಪಲಿದೆ. ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಿಂದ ಹೊರಟು 2 ಗಂಟೆಗೆ ಬೆಂಗಳೂರು ತಲುಪಲಿದೆ. ಆದರೆ ಈ ಸಮಯ ಇನ್ನು ಅಧಿಕೃತವಾಗಿಲ್ಲ ಎಂದು ರಾಘವೇಂದ್ರ ತಿಳಿಸಿದರು.
ಇದನ್ನೂ ಓದಿ – ಇಂಡಿಗೊ ವಿಮಾನಯಾನ ಸಂಸ್ಥೆ ವೆಬ್ಸೈಟ್ನಲ್ಲಿ ಶಿವಮೊಗ್ಗದ ಹೆಸರು | ಶಿವಮೊಗ್ಗ FMನಲ್ಲಿ ಶಾಸಕರ ಜೊತೆ ಫೋನ್ ಇನ್
ಏರೋ ಶೋಗೆ ಮನವಿ
ಬೆಂಗಳೂರಿನಲ್ಲಿ ನಡೆಯುವ ಮಾದರಿಯಲ್ಲೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿಯು ಏರೋ ಶೋ ಆಯೋಜಿಸುವಂತೆ ವಿಮಾನಯಾನ ಇಲಾಖೆಗೆ ಮನವಿ ಮಾಡಲಾಗಿದೆ. ಈ ಮೂಲಕ ಮಲೆನಾಡಿನ ಸೊಬಗನ್ನು ತೋರಿಸಲು ಸುವರ್ಣಾವಕಾಶವಾಗಲಿದೆ ಎಂದು ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422