ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 APRIL 2023
SHIMOGA : ಸದ್ಯದಲ್ಲೇ ಶಿವಮೊಗ್ಗ ಬೆಂಗಳೂರು ವಿಮಾನ (Flight) ಹಾರಾಟ ಆರಂಭವಾಗಲಿದೆ. ಇದಕ್ಕೆ ಬೇಕಾದ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಚುನಾವಣೆ ಮೊದಲೆ ವಿಮಾನ ಹಾರಾಟ ಶುರುವಾಗಬಹುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಇನ್ನೊಂದು ವಾರದಲ್ಲಿ ವಿಮಾನ (Flight) ಹಾರಾಟ ಆರಂಭವಾಗಲಿದೆ ಎಂದು ಈ ಹಿಂದೆ ತಿಳಿಸಿದ್ದೆ. ಒಂದು ವಾರದ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಇಂಡಿಗೋ ವಿಮಾನಯಾನ ಸಂಸ್ಥೆಯವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೇಂದ್ರ ವಿಮಾನಯಾನ ಪ್ರಾಧಿಕಾರದ (ಡಿಜಿಸಿಎ) ಜೊತೆಗೆ ಇಂಡಿಗೋ ಒಪ್ಪಂದ ಮಾಡಿಕೊಂಡಿದೆ. ಇಂಡಿಗೋ ಸಂಸ್ಥೆ ತನ್ನ ವೆಬ್‌ಸೈಟಿನಲ್ಲಿ ವಿಮಾನ ಸೇವೆಯ ಟೈಮಿಂಗ್ ಅಪ್‌ಲೋಡ್ ಮಾಡುವುದನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಏ.28ಕ್ಕೆ ಬರಲಿದೆ ವಿಶೇಷ ವಿಮಾನ, ಬರ್ತಿರೋದ್ಯಾರು?
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ಫೈರ್ ಇಂಜಿನ್ ಅಗತ್ಯವಿತ್ತು. ದುಬೈನಿಂದ ಮೂರು ಫೈರ್ ಇಂಜಿನ್ ತರಿಸಲಾಗಿದೆ. ಇನ್ನೊಂದೆರಡು ದಿನದಲ್ಲಿ ಅವುಗಳು ವಿಮಾನ ನಿಲ್ದಾಣ ತಲುಪಲಿವೆ. ಇಂಡಿಗೋ ಸಂಸ್ಥೆಗೆ 2 ಕೋಟಿ ರೂ. ಸಬ್ಸಿಡಿ ನೀಡಬೇಕಿದೆ. ಅದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದರು.

LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





