ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಭಾರಿ ಮಳೆಗೆ ನಗರದ ಬಿ.ಹೆಚ್.ರಸ್ತೆ ಈಜುಕೊಳದಂತಾಗಿದೆ (Pool). ಮಳೆ ನೀರು ಹರಿದು ಹೋಗಲು ಸಾದ್ಯವಾಗದೆ ರಸ್ತೆ ಮೇಲೆ ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಶಂಕರಮಠ ಸರ್ಕಲ್ನಿಂದ ಸೈನ್ಸ್ ಮೈದಾನ ಸಮೀಪ ಇರುವ ಏಥರ್ ಬೈಕ್ ಶೋ ರೂಂವರೆಗೆ ರಸ್ತೆಯಲ್ಲಿ ಎರಡು ಬದಿಯಲ್ಲು ಮಳೆ ನೀರು ನಿಂತಿದೆ. ರಸ್ತೆಯ ಎರಡು ಬದಿ ಮತ್ತು ಡಿವೈಡರ್ ಕೆಳಗೆ ನೀರು ಹರಿದು ಹೋಗಲು ವ್ಯವಸ್ಥೆ ಇದೆ. ಆದರೆ ಕಸ ಸೇರಿದ್ದರಿಂದ ನೀರು ಹರಿದು ಹೋಗಲಾಗದೆ ರಸ್ತೆ ಮೇಲೆ ಅರ್ಧ ಅಡಿಯಷ್ಟು ನೀರು ನಿಂತಿದೆ.
ಇನ್ನು, ರಸ್ತೆ ಮೇಲೆ ನೀರು ನಿಂತಿದ್ದರಿಂದ ಬಿ.ಹೆಚ್.ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆಲವು ಹೊತ್ತು ವಾಹನ ದಟ್ಟಾಣೆ ಉಂಟಾಗಿತ್ತು.



ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಗಾಳಿ ಮಳೆಗೆ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತ


LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






