ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JUNE 2021
ಶಿವಮೊಗ್ಗ ಮತ್ತು ಭದ್ರಾವತಿ ಪ್ರತ್ಯೇಕವಾಗಿ ಲಾಕ್ ಡೌನ್ ಸಡಿಲಿಕೆ ನಿಯಮ ಜಾರಿಗೊಳಿಸಲಾಗಿದೆ. ಉಳಿದಂತೆ ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ಅನ್ ಲಾಕ್ ಒಂದರ ನಿಯಮ ಜಾರಿಯಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಜೊತೆಗೆ ಸಭೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಕೆಲವು ವ್ಯಾಪಾರ ವಾಹಿವಾಟಿಗೆ ಮಧ್ಯಾಹ್ನ 12 ಗಂಟೆವರೆಗೆ, ಇನ್ನೂ ಕೆಲವಕ್ಕೆ ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಿರುವುದಾಗಿ ತಿಳಿಸಿದರು.
ಬಟ್ಟೆ ಮತ್ತು ಚಿನ್ನಾಭರಣ ವ್ಯಾಪಾರದ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಆದ್ದರಿಂದ ಆ ಬಗ್ಗೆ ತಾವು ಚರ್ಚೆ ಮಾಡುವುದಿಲ್ಲ. ಉಳಿದ ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟಿಗೆ ಈಗ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಅಂಗಡಿಗಳ ಮುಂದೆ ಗುಂಪುಗೂಡುವಂತಿಲ್ಲ
ವ್ಯಾಪಾರ, ವಾಹಿವಾಟುಗಳಿಗೆ ಅವಕಾಶ ನೀಡುತ್ತಿರುವ ಮಳಿಗೆಗಳ ಮುಂದೆ ಜನರು ಗುಂಪುಗೂಡುವಂತಿಲ್ಲ. ಒಂದು ವೇಳೆ ಜನರು ಗುಂಪುಗೂಡಿದರೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.
ಯಾವೆಲ್ಲ ವ್ಯಾಪಾರ ವಹಿವಾಟಿಗೆ ಅವಕಾಶವಿದೆ? ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422