ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 09 ಡಿಸೆಂಬರ್ 2019
ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಸಲಾಯಿತು. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಖುಷಿಪಟ್ಟರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದರು. ಈ ಸಂದರ್ಭ ಮಹಿಳೆಯರು ನೃತ್ಯ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ರಾಜ್ಯ ಉಪಾಧ್ಯಕ್ಷ ಎಂ.ಬಿ.ಭಾನುಪ್ರಕಾಶ್, ಮೇಯರ್ ಲತಾ ಗಣೇಶ್, ಉಪಮೇಯರ್ ಚನ್ನಬಸಪ್ಪ ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿದ್ದರು.
ಸಿಎಂ ಮನೆ ಮುಂದೆ ಸೆಲಬ್ರೇಷನ್
ವಿನೋಬನಗರದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆ ಮುಂದೆಯು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಪ್ರಮುಖರಾದ ಸಂತೋಷ್ ಬಳ್ಳೆಕೆರೆ, ಮಾಲ್ತೇಶ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
BJP workers Celebrates the by-election results. Shimoga BJP workers burst crackers and distribute sweets