ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 30 ಡಿಸೆಂಬರ್ 2019
ರಸ್ತೆ ಅಭಿವೃದ್ಧಿ, ಕೆರೆಗಳ ಪುನಶ್ಚೇತನ, ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಮಾಣ ಹೆಚ್ಚಳ ಸೇರಿದಂತೆ ಗ್ರಾಮೀಣ ಪ್ರದೇಶ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೈಶಾಲಿ ಹೇಳಿದ್ದಾರೆ.
ಶಿವಮೊಗ್ಗ ಪ್ರೆಸ್ ಟ್ರೆಸ್ಟ್ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ವೈಶಾಲಿ, ಮಳೆಯಿಂದ ಹಾನಿಗೀಡಾದ ರಸ್ತೆಗಳ ರಿಪೇರಿಗೆ 124 ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧವಾಗಿದೆ. ಇನ್ನು, 828 ಶಾಲೆಗಳ ದುರಸ್ಥಿಗೆ 34 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದರು.
ಮಂಗನಕಾಯಿಲೆ ನಿಯಂತ್ರಣಕ್ಕೆ ಮುಂಜಾಗ್ರತೆ
ಕಳೆದ ವರ್ಷ ಮಂಗನಾಯಿಲೆ ನಿಯಂತ್ರಣ ದೊಡ್ಡ ಸವಾಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಯಿತು. ಕಾಯಿಲೆ ನಿಯಂತ್ರಣದ ವಿಚಾರದಲ್ಲಿ ಇಲಾಖೆಗಳ ಸಮನ್ವಯ ಮುಖ್ಯ. ಈ ಬಾರಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಸಭೆಗಳನ್ನು ನಡೆಸಿ, ಜನರಲ್ಲೂ ತಿಳಿವಳಿಕೆ ಮೂಡಿಸಲಾಗಿದೆ ಎಂದರು.
ಜಲಾಮೃತದಲ್ಲಿ ಕೆರೆ ಒತ್ತುವರಿ ತೆರವು
ಜಲಾಮೃತ ಯೋಜನೆ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆ ಮೂಲಕ ಕೆರೆಗಳ ಒತ್ತುವರಿ ತೆರವು ಮಾಡಿ, ಜನರ ಸಹಯೋಗದೊಂದಿಗೆ ಕೆರೆಗಳ ಹೂಳೆತ್ತಲಾಗುತ್ತದೆ. ಆದರೆ ಈ ಭಾರಿ ಮಳೆಯಿಂದಾಗಿ ಕೆರಗಳು ತುಂಬಿವೆ. ಇದರಿಂದ ಹೂಳೆತ್ತುವ ಕೆಲಸ ಸ್ವಲ್ಪ ತಡವಾಗುತ್ತಿದೆ ಎಂದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಈಗಾಗಲೇ ಸಭೆಗಳನ್ನು ನಡೆಸಲಾಗಿದೆ. ಮುಖ್ಯೋಪಾಧ್ಯಯರ ಸಭೆಗಳನ್ನು ನಡೆಸಲಾಗಿದೆ. ಗ್ರಾಮ ಮಟ್ಟದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ. ಶೌಚಾಲಯ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡುವುದು ಸೇರಿದಂತೆ ಗ್ರಾಮೀಣಾಭಿವೃದ್ಧಿಗೆ ತಮ್ಮ ಆದ್ಯತೆ ಎಂದು ವೈಶಾಲಿ ಸ್ಪಷ್ಟಪಡಿಸಿದರು.
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422