SHIVAMOGGA LIVE NEWS | TRAIN | 17 ಏಪ್ರಿಲ್ 2022
ಶಿವಮೊಗ್ಗ ಟೌನ್ – ಚೆನ್ನೈ ವಿಶೇಷ ರೈಲಿಗೆ ಇವತ್ತು ಹಸಿರು ನಿಶಾನೆ ತೋರಿಸಲಾಯಿತು. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನೂತನ ರೈಲಿಗೆ ಚಾಲನೆ ನೀಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ ಅವರು ವಿಶೇಷ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು.
ಮೊದಲ ದಿನವೆ ಉತ್ತಮ ರೆಸ್ಪಾನ್ಸ್ – TRAIN
ಶಿವಮೊಗ್ಗ ಟೌನ್ – ಚೆನ್ನೈ ರೈಲಿಗೆ ಮೊದಲ ದಿನವೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ರೈಲು ರೇಣಿಗುಂಟ (ತಿರುಪತಿ) ಮೂಲಕ ಚೆನ್ನೈ ತಲುಪಲಿದೆ. ಹಾಗಾಗಿ ತಿರುಪತಿಗೆ ತೆರಳುವ ಭಕ್ತರಿಗು ಅನುಕೂಲವಾಗಿದೆ. ಮೊದಲ ದಿನವೆ ತಿರುಪತಿಗೆ ಹೆಚ್ಚಿನ ಪ್ರಯಾಣಿಕರು ಸಂಚರಿಸಿದ್ದು ವಿಶೇಷವಾಗಿತ್ತು.
ವಾರದಲ್ಲಿ ಎರಡು ಭಾರಿ ಸಂಚಾರ
ಶಿವಮೊಗ್ಗ ಟೌನ್ – ರೇಣಿಗುಂಟ – ಚೆನ್ನೈ ವಿಶೇಷ ರೈಲು ವಾರದಲ್ಲಿ ಎರಡು ದಿನ ಸಂಚರಿಸಲಿದೆ. ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ರೈಲು ಸಂಚರಿಸಲಿದೆ. ಸೋಮವಾರ ಮತ್ತು ಬುಧವಾರ ಚೆನ್ನೈನಿಂದ ಶಿವಮೊಗ್ಗಕ್ಕೆ ಆಗಮಿಸಲಿದೆ.
ಏಪ್ರಿಲ್ 17ರಿಂದ ಜೂನ್ 28ರವರೆಗೆ 22 ಟ್ರಿಪ್ ಈ ರೈಲು ಸಂಚರಿಸಲಿದೆ. ಪ್ರಾಯೋಗಿಕ ಸಂಚಾರಕ್ಕೆ ಉತ್ತಮ ಸ್ಪಂದನೆ ಸಿಕ್ಕರೆ ಈ ರೈಲು ಸೇವೆಯನ್ನು ಮುಂದುವರೆಸುವುದಾಗಿ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲಾಧಿಕಾರಿ ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ರೈಲ್ವೆ ಇಲಾಖೆ ಮೈಸೂರು ವಿಭಾಗದ ಅಡಿಷನಲ್ ಡಿವಿಷನಲ್ ಮ್ಯಾನೇಜರ್ ದೇವಶಯಂ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಇದ್ದರು.
ಇದನ್ನೂ ಓದಿ | ಶಿವಮೊಗ್ಗ – ಬೆಂಗಳೂರು ರೈಲ್ವೆ ಟೈಮಿಂಗ್ಸ್, ಯಾವ ರೈಲು ಎಷ್ಟೊತ್ತಿಗೆ ಹೊರಡುತ್ತೆ?
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200