ಶಿವಮೊಗ್ಗ: 2041ರ ವೇಳೆಗೆ ಶಿವಮೊಗ್ಗ – ಭದ್ರಾವತಿ ನಗರಗಳ ಜನಸಂಖ್ಯೆ ಗಮನದಲ್ಲಿ ಇಟ್ಟುಕೊಂಡು ನಗರಾಭಿವೃದ್ಧಿ ವ್ಯಾಪ್ತಿಯಲ್ಲಿ ಮಹಾಯೋಜನೆ (Plan) ಸಿದ್ಧಪಡಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸುಡಾ) ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸೂಡಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಶಿವಮೊಗ್ಗ ಜಿಲ್ಲೆ ಹಿಂದೆಂದಿಗಿಂತಲೂ ಹೆಚ್ಚು ವೇಗವಾಗಿ ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿದೆ. ಇಂತಹ ಸಂದರ್ಭ ಜಿಲ್ಲಾ ಕೇಂದ್ರವನ್ನು ಜನಸಂಖ್ಯೆ, ವಾಹನ ದಟ್ಟಣೆ ಆಧರಿಸಿ, ಆಸ್ಪತ್ರೆ, ಶಾಲಾ-ಕಾಲೇಜು, ಕೆರೆ-ಕಾಲುವೆ, ಸಂಪರ್ಕ ರಸ್ತೆ, ಉದ್ಯಾನ ಸೇರಿದಂತೆ ಒಟ್ಟಾರೆ ನಗರದ ಸೌಂದರ್ಯ ಗಮನದಲ್ಲಿಟ್ಟುಕೊಂಡು ಕ್ರಿಯಾ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
ಮಹಾಯೋಜನೆ ಹೇಗಿರಲಿದೆ?
ಮಹಾಯೋಜನೆ ಸಿದ್ಧಪಡಿಸಲು ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಸಂಬಂಧಿತ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಎರಡು ಹಂತದಲ್ಲಿ ಸಭೆ ಆಯೋಜಿಸಿ, ವಿಸ್ತೃತವಾಗಿ ಸಮಾಲೋಚನೆ ನಡೆಸಲಾಗಿದೆ ಎಂದರು.
ಪ್ರಸ್ತಾಪವಾದ ಕ್ರಿಯಾಯೋಜನೆಯಲ್ಲಿ ನಗರಕ್ಕೆ ಹೊಂದಿಕೊಂಡಂತಿರುವ ಆಯ್ದ 3-4 ಸ್ಥಳಗಳಲ್ಲಿ ಆಸ್ಪತ್ರೆಗಳಿಗಾಗಿ ನಿವೇಶನ ಕಾಯ್ದಿರಿಸಲಾಗಿದೆ. ಕೈಗಾರಿಕಾ ಕ್ಷೇತ್ರದ ವಿಸ್ತರಣೆಗಾಗಿ 100 ಎಕರೆ ಭೂಪ್ರದೇಶ ಕಾಯ್ದಿರಿಸಲೂ ಉದ್ದೇಶಿಸಲಾಗಿದೆ.
ನಗರದಲ್ಲಿನ ವಾಹನ ದಟ್ಟಣೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವರ್ತುಲ ರಸ್ತೆಗಳ ನಿರ್ಮಾಣ, ಪ್ರವಾಸೋದ್ಯಮ ಕ್ಷೇತ್ರದ ಉನ್ನತಿಗೆ ನೀಲನಕ್ಷೆಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಬಂಡವಾಳ ಹೂಡಿಕೆಗಾಗಿ ಜಿಲ್ಲೆಗೆ ಬರುವವರಿಗೆ ಅನುಕೂಲ ಕಲ್ಪಿಸಲೂ ಕ್ರಮವಹಿಸಲಾಗಿದೆ.

ಭಾರಿ ವಾಹನಗಳ ನಿಲುಗಡೆಗೆ ಅನುಕೂಲವಾಗುವಂತೆ ನಗರದ ಹೊರವಲಯದ ವಿಶಾಲವಾದ ಪ್ರದೇಶದಲ್ಲಿ ವ್ಯವಸ್ಥಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ನೀಡುವ ಸಲಹೆಗಳನ್ನು ಪ್ರಾಧಿಕಾರ ಮುಕ್ತವಾಗಿ ಸ್ವೀಕರಿಸಲಿದೆ.
ಪ್ರಸ್ತುತ ₹5 ಕೋಟಿ ಅಂದಾಜು ವೆಚ್ಚದಲ್ಲಿ ಸೂಡಾ ವ್ಯಾಪ್ತಿಯಲ್ಲಿನ ನಾಲ್ಕು ಕೆರೆಗಳನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರದಲ್ಲಿ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು.
ಆಯುಕ್ತ ವಿಶ್ವನಾಥ ಮುದ್ದಜ್ಜಿ, ನಿರ್ದೇಶಕರಾದ ಸಿದ್ದಪ್ಪ, ಪ್ರವೀಣ್‌ಕುಮಾರ್ ಉಪಸ್ಥಿತರಿದ್ದರು.
Plan
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





