SHIVAMOGGA LIVE NEWS
ಶಿವಮೊಗ್ಗ| ನಗರ ಇವತ್ತು ಸಹಜ ಸ್ಥಿತಿಗೆ ಮರಳುತ್ತಿದೆ. ಶಾಲೆ, ಕಾಲೇಜುಗಳು (SCHOOL COLLEGE) ಪುನಾರಂಭವಾಗಿವೆ. ಜನ ಮತ್ತು ವಾಹನ ಸಂಚಾರವು ನಿಧಾನಕ್ಕೆ ಆರಂಭವಾಗುತ್ತಿದೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ (BANDOBASTH) ನಿಯೋಜನೆ ಮಾಡಲಾಗಿದೆ.
ಸಾವರ್ಕರ್ ಫ್ಲೆಕ್ಸ್ (SAVARKAR FLEX) ವಿವಾದದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಅಂಗಡಿಗಳನ್ನು ಬಂದ್ ಮಾಡಿಸಲಾಗಿತ್ತು. ಇವತ್ತು ನಗರ ಸಹಜ ಸ್ಥಿತಿಗೆ ಮರಳುತ್ತಿದೆ.
ಹೇಗಿದೆ ನಗರದ ಪರಿಸ್ಥಿತಿ?
ಬಸ್ ಸಂಚಾರ | ಶಿವಮೊಗ್ಗ ನಗರದಲ್ಲಿ (SHIMOGA CITY) ಬಸ್ಸುಗಳು ರಸ್ತೆಗಿಳಿದಿವೆ. ಸಿಟಿ ಬಸ್ಸುಗಳು ಎಂದಿನಂತೆ ಸಂಚರಿಸುತ್ತಿವೆ. ಇನ್ನು, ಕೆಎಸ್ಆರ್ಟಿಸಿ ಬಸ್ಸುಗಳು ಕೂಡ ಕಾರ್ಯನಿರ್ವಹಿಸುತ್ತಿವೆ. ಶಿವಮೊಗ್ಗ – ಭದ್ರಾವತಿ ಮತ್ತು ಹೊರ ಜಿಲ್ಲೆಗಳಿಗು ಬಸ್ಸುಗಳು ಸಂಚರಿಸುತ್ತಿವೆ. ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರಾಯಣಿಕರ ಸಂಖ್ಯೆ ಸಹಜ ಸ್ಥಿತಿಯಲ್ಲಿದೆ. ಇತ್ತ, ಖಾಸಗಿ ಬಸ್ಸುಗಳು ಕೂಡ ಪ್ರಯಾಣಿಕರನ್ನು ಹೊತ್ತು ದೂರದ ಊರುಗಳತ್ತ ಸಾಗುತ್ತಿವೆ.
ಬೆರಳೆಣಿಕೆ ಆಟೋಗಳು | ಇನ್ನು, ಕೆಲವು ಆಟೋಗಳು ರಸ್ತೆಗಿಳಿದಿವೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳ ಬಳಿ ಆಟೋಗಳು ಹೆಚ್ಚಿವೆ. ಆದರೆ ನಗರದ ವಿವಿಧ ಸ್ಟಾಂಡ್’ಗಳಲ್ಲಿ ಆಟೋಗಳ ಸಂಖ್ಯೆ ಕಡಿಮೆ ಇದೆ.
ಶಾಲೆ, ಕಾಲೇಜು | ನಗರದ ಎಲ್ಲಾ ಶಾಲೆ, ಕಾಲೇಜುಗಳು ಇವತ್ತಿನಿಂದ ಪುನಾರಂಭವಾಗಿವೆ. ಶಾಲೆ, ಕಾಲೇಜುಗಳ ವಾಹನಗಳು ರಸ್ತೆಯಲ್ಲಿ ಓಡಾಡುತ್ತಿವೆ. ಹಲವು ಕಡೆ ಪೋಷಕರೆ ಮಕ್ಕಳನ್ನು ಶಾಲೆ, ಕಾಲೇಜಿಗೆ ಕರೆತಂದು ಬಿಡುತ್ತಿದ್ದಾರೆ.
ಗೊಂದಲದಲ್ಲಿ ವರ್ತಕರು | ಸಾವರ್ಕರ್ ಫ್ಲೆಕ್ಸ್ ವಿವಾದದಿಂದ ನಗರದಲ್ಲಿ ವ್ಯಾಪಾರ, ವಹಿವಾಟು ಸ್ಥಗಿತಗೊಂಡು ಕೋಟ್ಯಂತರ ರೂ. ನಷ್ಟವಾಗಿದೆ. ಇವತ್ತು ನಗರ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಅಂಗಡಿಗಳ ಬಾಗಿಲು ತೆಗೆಯಲಾಗುತ್ತಿದೆ. ಆದರೆ ಕೆಲವೆಡೆ ವ್ಯಾಪಾರ ನಡೆಸುತ್ತಿದ್ದ ಸಂದರ್ಭ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಪೊಲೀಸರ ಕುರಿತ ಆತಂಕದಲ್ಲಿಯೇ ವಿವಿಧೆಡೆ ಅಂಗಡಿಗಳಲ್ಲಿ ವ್ಯಾಪಾರ ಮಾಡಲಾಗುತ್ತಿದೆ. ಯಾವ ಸಂದರ್ಭದಲ್ಲಿ ಏನಾಗುತ್ತದೋ ಎಂಬ ಭೀತಿಯಲ್ಲೇ ಹಲವರು ಯಾವುದೆ ವಸ್ತುಗಳನ್ನು ಅಂಗಡಿಯಿಂದ ಹೊರಗಿಡದೆ ಬಾಗಿಲನ್ನಷ್ಟೆ ತೆಗೆದು ವಹಿವಾಟು ನಡೆಸುತ್ತಿದ್ದಾರೆ.
ಬಂದೋಬಸ್ತ್ | ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರುವುದರಿಂದ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮುಂದುವರೆಸಲಾಗಿದೆ. ಅಮೀರ್ ಅಹಮದ್ ಸರ್ಕಲ್, ಗಾಂಧಿ ಬಜಾರ್ ಮತ್ತು ಹೆಳೆ ಶಿವಮೊಗ್ಗ ಭಾಗದಲ್ಲಿ ಪೊಲೀಸರನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯೋಜನೆ ಮಾಡಲಾಗಿದೆ. ದೊಡ್ಡಪೇಟೆ, ತುಂಗಾ ನಗರ ಮತ್ತು ಕೋಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.
ಇದನ್ನೂ ಓದಿ – ‘ಮುಸ್ಲಿಂ ಏರಿಯಾಗಳು ಈ ದೇಶದ ಭಾಗವಲ್ಲವಾ? ಸಾವರ್ಕರ್ ಫೋಟೊ ಹಾಕೋಕೆ ನಿಷೇಧವಿದ್ಯಾ?’
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200