ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 APRIL 2021
ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರ ಅನ್ವಯ ಅಗತ್ಯ ವಸ್ತುಗಳ ಹೊರತು ಉಳಿದೆಲ್ಲ ವ್ಯಾಪಾರ, ವಹಿವಾಟುಗಳನ್ನು ಬಂದ್ ಮಾಡಲಾಯಿತು.
ಶಿವಮೊಗ್ಗ ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಗಾಂಧಿ ಬಜಾರ್, ನೆಹರೂ ರಸ್ತೆ, ಬಿ.ಹೆಚ್.ರಸ್ತೆ ಸೇರಿದಂತೆ ಹಲವು ಕಡೆ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು.
ಪೊಲೀಸರು ಗಸ್ತು ತಿರುಗಿ ಮದ್ಯಾಹ್ನದಿಂದಲೇ ಅಂಗಡಿಗಳನ್ನು ಬಂದ್ ಮಾಡಿಸಿದರು. ಸರ್ಕಾರದ ಮಾರ್ಗಸೂಚಿ ಇರುವುದರಿಂದ ಅಂಗಡಿಗಳನ್ನು ಕೂಡಲೆ ಬಂದ್ ಮಾಡಬೇಕು ಎಂದು ಮೈಕ್ ಮೂಲಕ ಅನೌನ್ಸ್ ಮಾಡಿದರು.
ಗಾಂಧಿ ಬಜಾರ್ನಲ್ಲಿ ನಿಧಾನಗತಿ
ಮದ್ಯಾಹ್ನದಿಂದಲೇ ಗಾಂಧಿ ಬಜಾರ್ನಲ್ಲಿ ಪೊಲೀಸರು, ಅಂಗಡಿಗಳನ್ನು ಬಂದ್ ಮಾಡಿಸುವಂತೆ ಮನವಿ ಮಾಡಿದರು. ಆದರೆ ವ್ಯಾಪಾರಿಗಳು ಹಿಂದೇಟು ಹಾಕುತ್ತಿದ್ದರಿಂದ ಗಸ್ತು ಹೆಚ್ಚಿಸಲಾಯಿತು. ಬಂದ್ ಮಾಡುವಂತೆ ಪೊಲೀಸರು ಸೂಚಿಸಿದರು. ಅಗತ್ಯ ವಸ್ತುಗಳ ಹೊರತು ಉಳಿದೆಲ್ಲ ಅಂಗಡಿಗಳು ಬಂದ್ ಮಾಡಲಾಯಿತು.
ವ್ಯಾಪಾರಿಗಳ ತೀವ್ರ ಆಕ್ರೋಶ
ಸರ್ಕಾರ ದಿನಕ್ಕೊಂದು ಮಾರ್ಗಸೂಚಿ ಪ್ರಕಟಿಸುತ್ತಿದೆ. ಇದರಿಂದ ಜನರಲ್ಲಿ ಗೊಂದಲ ನಿರ್ಮಾಣವಾಗುತ್ತಿದೆ. ಕಳೆದ ವರ್ಷದ ಲಾಕ್ಡೌನ್ನಿಂದಾಗಿ ವ್ಯಾಪಾರವಿಲ್ಲದೆ ಸಂಕಷ್ಟದಲ್ಲಿರುವಾಗ, ಮತ್ತೊಮ್ಮೆ ಹೊಡೆತ ಬಿದ್ದರೆ ಬದುಕು ದುಸ್ತರವಾಗಲಿದೆ ಎಂದು ಗಾಂಧಿ ಬಜಾರ್ನ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿಡಿಯೋ ನ್ಯೂಸ್
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422