NEWS HIGHLIGHTS
ಶಿವಮೊಗ್ಗ : ಕಾಶ್ಮೀರದಲ್ಲಿ ಉಗ್ರರ ದಾಳಿಗೆ (Attack) ಸಾವನ್ನಪ್ಪಿದ ಮಂಜುನಾಥ ಅವರ ಮೃತದೇಹ ಗುರುವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಅಂತ್ಯ ಸಂಸ್ಕಾರದ ಹಿನ್ನೆಲೆ ಅರ್ಧ ದಿನ ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದಲ್ಲಿ ಮಂಜುನಾಥ್ ಮನೆ ಸುತ್ತಲು ಬ್ಯಾರಿಕೇಡ್, ಪೊಲೀಸ್ ಬಂದೋಬಸ್ತ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಪ್ರಮುಖ ಸಂಗತಿಗಳನ್ನು ತಿಳಿಸಿದರು.
ಇಲ್ಲಿದೆ ಮೂರು ಪ್ರಮುಖ ಪಾಯಿಂಟ್

ಬೆಳಗ್ಗೆ 9 ಗಂಟೆ ಹೊತ್ತಿಗೆ ಮೃತದೇಹ ಬರಲಿದೆ. ಮಧ್ಯಾಹ್ನ 12.30ರವರೆಗೆ ಮನೆ ಬಳಿ ಅಂತಿಮ ವಿಧಿವಿಧಾನ ಮತ್ತು ಸಾರ್ವಜನಿಕ ದರ್ಶನ ಇರಲಿದೆ. ಆ ಬಳಿಕ ನಗರದಲ್ಲಿ ಮೆರವಣಿಗೆ ನಡೆಯಲಿದೆ.
ಸಾಗರ ರಸ್ತೆ, ಐಬಿ ಸರ್ಕಲ್, ಕುವೆಂಪು ರಸ್ತೆ, ಜೈಲ್ ವೃತ್ತ, ನೆಹರೂ ರಸ್ತೆ, ಬಿ.ಹೆಚ್.ರಸ್ತೆ, ಶಂಕರಮಠ ಸರ್ಕಲ್‌ನಿಂದ ರೋಟರಿ ಚಿತಾಗಾರಕ್ಕೆ ತಲುಪಲಿದೆ.
ಮಂಜನಾಥ ರಾವ್ ಅವರ ಅಂತ್ಯಸಂಸ್ಕಾರ ಮತ್ತು ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅರ್ಧ ದಿನ ಅಂಗಡಿ ಮುಂಗಟ್ಟು ಬಂದ್ ಮಾಡಲಾಗುತ್ತದೆ.