FATAFAT NEWS, 23 OCTOBER 2024
10 ದಿನದ ಗಡುವು ನೀಡಿದ ವೇದಿಕೆ
ಪತ್ರಿಕಾ ಭವನ : ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. 10 ದಿನದ ಒಳಗೆ ಜಲ ಶುದ್ಧೀಕರಣ ಘಟಕದ ಸಮಸ್ಯೆ ಪರಿಹರಿಸಬೇಕು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಡುವು ನೀಡಿದ ನಾಗರಿಕ ಹಿತರಕ್ಷಣ ವೇದಿಕೆ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತ್ ಕುಮಾರ್. ಶಾಸಕ ಚನ್ನಬಸಪ್ಪ ಅವರು ತಮ್ಮ ವೇದಿಕೆ ಸದಸ್ಯರ ಪ್ರಮುಖರೊಂದಿಗೆ ಜಂಟಿಯಾಗಿ ಪರೀಶಿಲನೆ ನಡೆಸಬೇಕು ಎಂದು ಆಗ್ರಹಿಸಿದರು.
![]() |
ಇದನ್ನೂ ಓದಿ » ಗೌರಿ ಹಂತಕರಿಗೆ ಸನ್ಮಾನ, ಶಿವಮೊಗ್ಗದಲ್ಲಿ ಆಕ್ರೋಶ, ಜಾಮೀನು ವಜಾಗೆ ಆಗ್ರಹ
ಅ.26ರಂದು ಬಂಗಾರಪ್ಪ ಜನ್ಮದಿನೋತ್ಸವ
ಪತ್ರಿಕಾ ಭವನ : ಅ.26ರಂದು ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಜನ್ಮದಿನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ನಡೆಸಲಾಗುತ್ತದೆ. ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ಇತರಿಸಲಾಗುತ್ತದೆ. ಅಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣು ಗೋಪಾಲ್ ನಾಯಕ್ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೊಬೈಲ್ ಟವರ್ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್ ನಾಪತ್ತೆ
ವಿಶೇಷ ಪೊಲೀಸ್ ಒತ್ತಾಯ, ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ : ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ದಲಿತರ ಮೇಲಿನ ದೌರ್ಜನ್ಯ ತಡೆಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ಪೊಲೀಸ್ ಠಾಣೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ » ಬ್ಯಾಂಕ್ ಮ್ಯಾನೇಜರ್ಗೆ ಕರೆ ಮಾಡಿದ ಶಿಕ್ಷಕಿ, 24 ಗಂಟೆ ಬಳಿಕ ಕಾದಿತ್ತು ಶಾಕ್
ಅ.25ರಂದು ಆಚಾರ್ಯತ್ರಯರ ಜಯಂತಿ
ಪತ್ರಿಕಾ ಭವನ : ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಅ.25ರಂದು ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಚಾರ್ಯತ್ರಯರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಸಂಜೆ 6 ಗಂಟೆಗೆ ಉಡುಪಿಯ ಆಸೆಮ್ಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರೊ. ಪವನ್ ಕಿರಣ್ ರೆ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರಿಂದ ದಿಢೀರ್ ದಾಳಿ, 512 ಕಡೆ ದಂಡ, 5 ಎಫ್ಐಆರ್ ದಾಖಲು
ಸಚಿವರ ಹೇಳಿಕೆ ಅತಿರೇಖ, ಅಕ್ಷಮ್ಯ
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬದ ಕುರಿತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ನೀಡಿರುವ ಹೇಳಿಕೆ ಅಕ್ಷಮ್ಯ ಮತ್ತು ಅತಿರೇಖವಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಪತ್ನಿಯ ಸಾವನ್ನು ಟೀಕೆಗೆ ಬಳಸಿಕೊಂಡಿರುವುದು ಮನುಷ್ಯತ್ವ ಇಲ್ಲದ ಅತ್ಯಂತ ಹೀನ ರಾಜಕಾರಣದ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ » ಕದ್ದ ಬ್ಯಾಟರಿ ಜೊತೆಗೆ ತಮ್ಮ ಬೈಕನ್ನೇ ಬಿಟ್ಟು ಪರಾರಿಯಾದ ಕಳ್ಳರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200