SHIMOGA CITY NEWS, 27 SEPTEMBER 2024
» ಕೋಟೆಗಂಗೂರಿಗೆ ರೈಲ್ವೆ ಮಿನಿಸ್ಟರ್ ಭೇಟಿ
ಶಿವಮೊಗ್ಗ ಸಿಟಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೆ ಕೋಚಿಂಗ್ ಟರ್ಮಿನಲ್‌ಗೆ ಭೇಟಿ ನೀಡಿದ್ದರು. ಕಾಮಗಾರಿ ಪರಿಶೀಲನೆ ನಡೆಸಿದರು. ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಮುಂದಿನ ವರ್ಷ ಈ ಹೊತ್ತಿಗೆ ಟರ್ಮಿನಲ್ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಇದನ್ನೂ ಓದಿ » ಸಿದ್ದರಾಮಯ್ಯ ಬೆಂಬಲಿಸಿ ಶಿವಮೊಗ್ಗದಲ್ಲಿ ಪ್ರತಿಜ್ಞೆ ಸ್ವೀಕಾರ
» ರೈಲ್ವೆ ಯೋಜನೆಗಳ ಕುರಿತು ಮಹತ್ವದ ಸಭೆ
ಶಿವಮೊಗ್ಗ ಸಿಟಿ : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರೈಲ್ವೆ ಇಲಾಖೆ ಕಾಮಗಾರಿಗಳ ಕುರಿತು ರೈಲ್ವೆ ಇಲಾಖೆ ಅಧಿಕಾರಿಗಳ ಜೊತೆಗೆ ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಸಭೆ ನಡೆಸಿದರು. ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕರು ಉಪಸ್ಥಿತರಿದ್ದರು. ರೈಲ್ವೆ ಯೋಜನೆಗಳು, ರೈಲುಗಳ ಸಮಯ ಬದಲಾವಣೆ ಸೇರಿದಂತೆ ಪ್ರಮುಖ ಸಂಗತಿ ಚರ್ಚಿಸಲಾಯಿತು.
ಇದನ್ನೂ ಓದಿ » ಕೆಲಸ ಮುಗಿಸಿ ಗೋಪಿ ಸರ್ಕಲ್‌ಗೆ ಮರಳಿದ ವ್ಯಕ್ತಿಗೆ ಕಾದಿತ್ತು ಆಘಾತ
» ಮುಕ್ತವಾಗಿ ಸಭೆ ನಡೆಸುವಂತೆ ಪ್ರತಿಭಟನೆ
ಶಿವಮೊಗ್ಗ ಸಿಟಿ : ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿಯ ಬಗ್ಗೆ ನಡೆಯುವ ಸಭೆಗಳನ್ನು ಮುಕ್ತವಾಗಿ ನಡೆಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರೈತ ಮುಖಂಡ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ಸಭೆ ನಡೆಯಿತು.
ಇದನ್ನೂ ಓದಿ » GOOD MORNING | ಒಂದೇ ಕ್ಲಿಕ್‌ನಲ್ಲಿ SHIMOGA ಜಿಲ್ಲೆಯ ಸುದ್ದಿ
ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಿ
ಶಿವಮೊಗ್ಗ ಸಿಟಿ : ಹಿಂದೂ ಧಾರ್ಮಿಕ ಮತ್ತು ತೀರ್ಥಕ್ಷೇತ್ರಗಳನ್ನು ಸರ್ಕಾರದ ದಬ್ಬಾಳಿಕೆ ಮತ್ತು ನಿಯಂತ್ರಣಗಳಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಶಾಖೆ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ವಾಸುದೇವ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಇದನ್ನೂ ಓದಿ » ರೈತರ ಅಭಿಪ್ರಾಯ ಮುಖ್ಯ, ಮುಕ್ತ ಸಭೆಗೆ ಆಗ್ರಹ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ
» ಕೆಲಸಕ್ಕೆ ಗೈರಾಗಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ
ಶಿವಮೊಗ್ಗ ಸಿಟಿ : ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ಹೊರಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಶಿವಮೊಗ್ಗ ತಾಲೂಕು ಘಟಕದಿಂದ ತಾಲೂಕು ಅಧಿಕಾರಿಗಳು ಇಂದಿನಿಂದ ಕೆಲಸಕ್ಕೆ ಗೈರು ಹಾಜರಾಗಿ ಕಪ್ಪುಪಟ್ಟಿ ಧರಿಸಿ ತಾಲೂಕು ಕಚೇರಿ ಮುಂಭಾಗ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸಿದರು.
ಇದನ್ನೂ ಓದಿ » ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್, ಯಾಕೆ?
» ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ
ಶಿವಮೊಗ್ಗ ಸಿಟಿ : ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನಾ ಸಭೆ ನಡೆಸಿದರು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಮಾಜಿ ಸಂಸದ ಆಯನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಬಲ್ಕಿಷ್ ಬಾನು, ಪ್ರಮುಖರಾದ ರಮೇಶ್ ಹೆಗ್ಡೆ, ಮಧುಸೂದನ್, ಚೇತನ್ ಗೌಡ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಕಡಿಮೆಯಾದ ಮಳೆ, ಹಿಂಗಾರು ಆರಂಭದ ದಿನಾಂಕ ಘೋಷಿಸಿದ ಹಾವಾಮಾನ ಇಲಾಖೆ
» ಮೀಸಲಾತಿ ಒಳ ವರ್ಗಿಕರಣ ಕುರಿತು ವಿಚಾರ ಸಂಕಿರಣ
ಶಿವಮೊಗ್ಗ ಸಿಟಿ : ಕರ್ನಾಟಕ ಪರಿಶಿಷ್ಟ ಜಾತಿಗಳ ಮೀಸಲಾತಿ ಹಿತರಕ್ಷಣಾ ಒಕ್ಕೂಟ ಮತ್ತು ವಿವಿಧ ಸಮುದಾಯಗಳ ಸಂಯುಕ್ತಾಶ್ರಯದಲ್ಲಿ ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿ ಒಳ ವರ್ಗೀಕರಣ ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಿತು. ಕಾಂಗ್ರೆಸ್ ಮುಖಂಡ ಡಾ. ಶ್ರೀನಿವಾಸ್ ಕರಿಯಣ್ಣ ವಿಚಾರ ಸಂಕಿರಣ ಉದ್ಘಾಟಿಸಿದರು. ವಿವಿಧ ವಿಚಾರ ಗೋಷ್ಠಿಗಳು ನಡೆದವು.
ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?
» ಒಪಿಎಸ್ ಜಾರಿಗೆ ಒತ್ತಾಯಿಸಿ ಮನವಿ
ಶಿವಮೊಗ್ಗ ಸಿಟಿ : ಹೊಸ ಪಿಂಚಣಿ ನೀತಿ ರದ್ದುಗೊಳಿಸಿ ಹಳೆ ಪಿಂಚಣಿ ನೀತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯ ಕಾರ್ಯದರ್ಶಿ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ರಾಘವೇಂದ್ರ.ಕೆ.ಎಸ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ರಾಜ್ಯ ಉಪಾಧ್ಯಕ್ಷ ಡಾ. ರಜನಿಕಾಂತ್, ರಾಜ್ಯ ಸಹ ಕಾರ್ಯದರ್ಶಿ ಚಂದ್ಯಾನಾಯ್ಕ, ಜಿಲ್ಲಾ ಕಾರ್ಯದರ್ಶಿ ಶಿವಶಂಕರ್, ಡಾ. ಪರಿಸರ ನಾಗರಾಜ್ ಸೇರಿ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200