SHIMOGA CITY NEWS
ರಿಯಲ್ ಎಸ್ಟೇಟ್ ಉದ್ಯಮಿ ವಿರುದ್ಧ ಕ್ರಮಕ್ಕೆ ಒತ್ತಾಯ
ಪೊಲೀಸ್ ಕಚೇರಿ: ಸಾಗರದ ಪತ್ರಕರ್ತ ಮಹೇಶ್ ಹೆಗಡೆ ಅವರಿಗೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಜೀವ ಬೆದರಿಕೆ ಒಡ್ಡಿ, ಹಲ್ಲೆಗೆ ಯತ್ನಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿತು. ಪ್ರಮುಖರಾದ ಎನ್.ರವಿಕುಮಾರ್, ಬಂಡಿಗಡಿ ನಂಜುಂಡಪ್ಪ, ಹಾಲಸ್ವಾಮಿ, ಕೆ.ಎಸ್.ಹುಚ್ರಾಯಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ದಿನ ಭವಿಷ್ಯ | 3 ಜೂನ್ 2025 | ಇವತ್ತು ಈ ರಾಶಿಗೆ ಆರ್ಥಿಕ ಸ್ಥಿತಿ ಸುಧಾರಿಸಲಿದೆ, ಉಳಿದ ರಾಶಿಗಳಿಗೆ ಹೇಗಿದೆ?
ಗೋ ಹತ್ಯೆ ಸಂಪೂರ್ಣ ನಿಷೇಧಕ್ಕೆ ಪಟ್ಟು
ಜಿಲ್ಲಾಧಿಕಾರಿ ಕಚೇರಿ: ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರು ಜಿಲ್ಲೆಯಲ್ಲಿ ಗೋ ಹತ್ಯೆಯಾಗುತ್ತಿದೆ. ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು. ಗೋವು ಕಳ್ಳತನ ತಪ್ಪಿಸಲು ಜಿಲ್ಲೆಯಲ್ಲಿ ನಾಕಾಬಂದಿ ಹಾಕಿ ಪರಿಶೀಲಿಸಬೇಕು. ಹಿಂದೆ ಕೃತ್ಯದಲ್ಲಿ ಭಾಗಿಯಾದವರಿಗೆ ಎಚ್ಚರಿಕೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಪಟ್ಟಿ ನೀಡಲಾಯಿತು. ಪ್ರಮುಖರಾದ ವಾಸುದೇವ್.ಜೆ.ಆರ್, ರಮೇಶ್ ಬಾಬು, ಜಿತೇಂದ್ರ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ನೇಣು ಬಿಗಿದ ಸ್ಥಿತಿಯಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೃತದೇಹ ಪತ್ತೆ
15 ದಿನದ ಯೋಗ, ಧ್ಯಾನ, ಪ್ರಾಣಯಾಮ ಶಿಬಿರ
ಬಸವನಗುಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದಶಮಾನೋತ್ಸವ ಅಂಗವಾಗಿ ಶ್ರೀ ಶಿವಗಂಗಾ ಯೋಗ ಕೇಂದ್ರ, ಸರ್ಕಾರಿ ನೌಕರರ ಸಂಘದ ವತಿಯಿಂದ 15 ದಿನದ ಉಚಿತ ಯೋಗಾಸನ, ಪ್ರಾಣಯಾಮ ಮತ್ತು ಧ್ಯಾನ ಶಿಬಿರಕ್ಕೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಚಾಲನೆ ನೀಡಿದರು. ಸರ್ಕಾರಿ ನೌಕರರ ವಿಕಾಸ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಯೋಗ ಕೇಂದ್ರದ ಟ್ರಸ್ಟಿ ಕೆ.ಈ.ಕಾಂತೇಶ್ ಸೇರಿ ಹಲವರು ಭಾಗವಹಿಸಿದ್ದರು.
ಇದನ್ನೂ ಓದಿ » ದಿನ ಪಂಚಾಂಗ | 3 ಜೂನ್ 2025 | ಇವತ್ತು ರಾಹುಕಾಲ, ಯಮಗಂಡ ಕಾಲ ಯಾವಾಗಿದೆ? ಶುಭ ಸಮಯ ಯಾವುದು?
ಆತಿಥ್ಯ ರತ್ನ, ಗೋಪನಾಥ್‌ಗೆ ಸನ್ಮಾನ
ಮಥುರಾ ಪ್ಯಾರಡೈಸ್: ಆತಿಥ್ಯ ರತ್ನ ಪ್ರಶಸ್ತಿ ಪುರಸ್ಕೃತರಾದ ಮಥುರಾ ಪ್ಯಾರಡೈಸ್ ಹೊಟೇಲ್ ಮಾಲೀಕ ಎನ್.ಗೋಪಿನಾಥ್ ಅವರಿಗೆ ಸಿಬ್ಬಂದಿ ಸನ್ಮಾನಿಸಿದರು. ಮಥುರಾ ಫುಡ್ ಪ್ರಾಡೆಕ್ಟ್‌ನ ಸಂಸ್ಥಾಪಕಿ ಡಾ.ಬಿ.ವಿ.ಲಕ್ಷ್ಮೀದೇವಿ ಗೋಪಿನಾಥ್, ಸಿಬ್ಬಂದಿ ನಾಗರಾಜ್, ಗಜೇಂದ್ರ, ಜಯಶ್ರೀ, ರವಿಕುಮಾರ್, ಅಭಿಷೇಕ್ ಶೆಟ್ಟಿ, ಸಂದೇಶ್, ಸಂದೀಪ್ ಸೇರಿ ಹಲವರು ಇದ್ದರು.

ಶಿವಮೊಗ್ಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನ
ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ 141ನೇ ಜನ್ಮದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜೂ.4ರಂದು ಸರ್ಕಾರಿ ಬೆಳಗ್ಗೆ 11 ಗಂಟೆಗೆ ಸೈನ್ಸ್ ಮೈದಾನದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಜಿ.ವಿ.ಸಂಗಮೇಶ್ವರ ಅವರು ಉಪನ್ಯಾಸ ನೀಡಲಿದ್ದಾರೆ.

ಈಶ್ವರಪ್ಪ ಜನ್ಮದಿನ, ಮಹಿಳೆಯರಿಗೆ ಆಟೋಟ ಸ್ಪರ್ಧೆ
ನೆಹರು ಕ್ರೀಡಾಂಗಣ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಜನ್ಮದಿನದ ಅಂಗವಾಗಿ ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ ಸಂಸ್ಥೆ ವತಿಯಿಂದ ಸ್ವ ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಹಾನಗರ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಉದ್ಘಾಟಿಸಿದರು. ವಿವಿಧ ಸ್ವಸಹಾಯ ಸಂಘಗಳ ಮಹಿಳೆಯರು ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ಹೊಸ ಖಾಸಗಿ ಶಾಲೆಗೆ ಅನುಮತಿ ಬೇಡ
ಜಿಲ್ಲಾಧಿಕಾರಿ ಕಚೇರಿ: ಸರ್ಕಾರಿ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳನ್ನು ಉಳಿಸುವ ಸಲುವಾಗಿ ಖಾಸಗಿ ಶಾಲೆಗಳ ಆರಂಭಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಹೆಚ್.ಎಸ್.ಕಿರಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶಫಿ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 3 ಜೂನ್ 2025 | ಇವತ್ತು ಎಲ್ಲೆಲ್ಲಿ ಮಳೆ ಮುನ್ಸೂಚನೆ ಇದೆ?
ಮಹಿಳೆಯರಿಗೆ ಗುರುತಿನ ಚೀಟಿ ವಿತರಣೆ
ಪತ್ರಿಕಾ ಭವನ: ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಭಾಭವನದಲ್ಲಿ ಜೂ.3ರಂದು ಬೆಳಗ್ಗೆ 10.30ಕ್ಕೆ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ರಾಜ್ಯ ಮಹಿಳಾ ಘಟಕ ಮತ್ತು ಶಿವಮೊಗ್ಗ ಜಿಲ್ಲಾ ಶಾಖೆಯಿಂದ ಸದಸ್ಯತ್ವ ಗುರುತಿನ ಚೀಟಿ ವಿತರಣೆ, ಸಾಂಪ್ರದಾಯಿಕ ಸಸ್ಯಾಹಾರಿ ಖಾದ್ಯಗಳ ಪ್ರಾತ್ಯಕ್ಷಿಕೆ ಮತ್ತು ಸಾಮಾನ್ಯ ಜ್ಞಾನದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಸುರೇಂದ್ರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200