SHIVAMOGGA LIVE NEWS, 30 JANUARY 2024
ಫಟಾಫಟ್ ಸುದ್ದಿ : ಶಿವಮೊಗ್ಗ ನಗರದಲ್ಲಿ (city) ಇವತ್ತು ಏನೆಲ್ಲ ಆಯ್ತು? ಫಟಾಫಟ್ ಅಪ್‌ಡೇಟ್ ಇಲ್ಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
‘ಕುವೆಂಪು ವಿವಿ ಮುಚ್ಚುವ ಹುನ್ನಾರʼ
ಬಿಜೆಪಿ ಕಚೇರಿ : ಉನ್ನತ ಶಿಕ್ಷಣ ಸಚಿವರ ನಿರ್ಲಕ್ಷ್ಯ, ಕುಲಪತಿ, ಕುಲಸಚಿವರ ದರ್ಪ ಗಮನಿಸಿದರೆ ಕುವೆಂಪು ವಿಶ್ವವಿದ್ಯಾಲಯವನ್ನು ಮುಚ್ಚುವ ಹುನ್ನಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಆರೋಪಿಸಿದರು. ಸಿಂಡಿಕೇಟ್ ಸಭೆಗಳು ಸರಿಯಾಗಿ ನಡೆಯುತ್ತಿಲ್ಲ. ಶೈಕ್ಷಣಿಕ ಕ್ಯಾಲೆಂಡರ್ ಸಮರ್ಪಕವಾಗಿಲ್ಲ. ಅಗತ್ಯಕ್ಕಿಂತಲು ಹೆಚ್ಚು ಸಿಬ್ಬಂದಿ ಇದ್ದಾರೆ ಎಂದು ಆರೋಪಿಸಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಚಾಲನೆ
ಪತ್ರಿಕಾ ಭವನ : ಫೆ.4ರಂದು ಸಾವೀರಾರು ಸ್ವಾಮೀಜಿಗಳ ನೇತೃತ್ವದಲ್ಲಿ ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಚಾಲನೆ ನೀಡಲಾಗುತ್ತದೆ. ಶಿವಮೊಗ್ಗದಿಂದ ರಾಷ್ಟ್ರಭಕ್ತರ ಬಳಗದ 250ಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಕೀಲ ಕೆ.ಪಿ.ಶ್ರೀಪಾಲ್‌ಗೆ ಸನ್ಮಾನ
ಪತ್ರಿಕಾ ಭವನ : ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿಗೆ ಪ್ರಮುಖ ಪಾತ್ರ ವಹಿಸಿದ ಸಮಿತಿಯ ಪ್ರಮುಖರಾದ ವಕೀಲ ಕೆ.ಪಿ.ಶ್ರೀಪಾಲ್ ಅವರನ್ನು ಸೌರ್ಹಾದವೆ ಹಬ್ಬ ಬಳಗದ ವತಿಯಿಂದ ಸನ್ಮಾನಿಸಲಾಗುತ್ತಿದೆ. ಜ.31ರಂದು ಸಂಜೆ 5.30ಕ್ಕೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಳಗದ ರಾಜ್ಯ ಸಂಚಾಲಕ ಗುರುಮೂರ್ತಿ ತಿಳಿಸಿದರು. ಹೊನ್ನಾಳಿ ಚಂದ್ರಶೇಖರ್, ಅರಸಾಳು ಸುರೇಶ್ ಸುದ್ದಿಗೋಷ‍್ಠಿಯಲ್ಲಿದ್ದರು.
ಖರ್ಗೆ ವಾಜಾಗೆ ಮಹಿಳೆಯರ ಆಗ್ರಹ
ಜಿಲ್ಲಾಧಿಕಾರಿ ಕಚೇರಿ : ಮಹಾಕುಂಭಮೇಳದ ಕುರಿತು ವ್ಯಂಗ್ಯ ಮಾಡಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭಾ ಸ್ಥಾನದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿತು. ಒಂದು ಜನಾಂದ ಒಲೈಕೆ, ಹೈಕಮಾಂಡ್ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಕಾರ್ಯಕರ್ತೆಯರು ಆರೋಪಿಸಿದರು. ನಗರ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್, ಕಾರ್ಯದರ್ಶಿ ಯಶೋದ ವೈಷ್ಣವ್, ಶಾಂತಾ ಸುರೇಂದ್ರ ಸೇರಿದಂತೆ ಹಲವರು ಇದ್ದರು.
ಚಾಲಕರಿಗೆ ಅಗೌರವ, ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ : ಕರ್ಕಶ ಹಾರನ್ ಹೊಂದಿರುವ ಬಸ್ಸುಗಳನ್ನು ತಡೆದು ಪರಿಶೀಲಿಸುವ ಸಂದರ್ಭ ಸಂಚಾರ ಠಾಣೆ ಪಿಎಸ್‌ಐ ಚಾಲಕರೊಂದಿಗೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದು ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಗಾಂಧೀಜಿ ಪುಣ್ಯಸ್ಮರಣೆ, ಫೋಟೊಗೆ ಪುಷ್ಪನಮನ
ಕಾಂಗ್ರೆಸ್ ಕಚೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಗಾಂಧೀಜಿ ಅವರು ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅವರ ಆದರ್ಶವನ್ನು ಎಲ್ಲರು ಪಾಲಿಸಬೇಕು ಎಂದರು.
ಶಿವಮೊಗ್ಗ ಡಿಸಿಎಂ ಡಿ.ಕೆ.ಶಿವಕುಮಾರ್
ವಿಮಾನ ನಿಲ್ದಾಣ : ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಎಂ.ಪಿ.ಪಾಟೀಲ್ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪೊಲೀಸ್ ಇಲಾಖೆ ವತಿಯಿಂದ ಗಾರ್ಡ್ ಆಫ್ ಹಾನರ್ ನೀಡಲಾಯಿತು.
ನೆಟ್‌ವರ್ಕ್ ಸಮಸ್ಯೆ ಕುರಿತು ಚರ್ಚೆ
ಪ್ರವಾಸಿ ಮಂದಿರ : ಸಂಸದ ಬಿ.ವೈ.ರಾಘವೇಂದ್ರ ಅಧ್ಯಕ್ಷತೆಯಲ್ಲಿ ಭಾರತೀಯ ಸಂಚಾರ ನಿಗಮ ನಿಯಮಿತ (BSNL) ಇದರ ಸಲಹಾ ಸಮಿತಿ ಸಭೆ ನಡೆಸಲಾಯಿತು. ನೆಟ್‌ವರ್ಕ್ ಸಮಸ್ಯೆ, ಹೊಸ ಟವರ್‌ಗಳ ಅಳವಡಿಕೆ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್ ಕುಮಾರ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗ, ಎನ್.ಆರ್.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ