ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA CITY NEWS, 4 NOVEMBER 2024 : ಶಿವಮೊಗ್ಗ ನಗರದಲ್ಲಿ ಇವತ್ತು ಏನೇನಾಯ್ತು. ಇಲ್ಲಿದೆ ಫಟಾಫಟ್ ಸುದ್ದಿ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ : ವಕ್ಫ್ ವಿವಾದದ ಹಿನ್ನೆಲೆ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ. ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ ಸೇರಿ ಹಲವರು ಪೊಲೀಸ್ ವಶಕ್ಕೆ. ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಗಳಲ್ಲಿ ಬಿಜೆಪಿ ವತಿಯಿಂದ ಮೆರವಣಿಗೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.ಶಾಸಕ ಸೇರಿ ಹಲವರು ಪೊಲೀಸ್ ವಶಕ್ಕೆ
ಪತ್ರಿಕಾ ಭವನ : ತುಂಗಭದ್ರಾ ನದಿ ಪಾವಿತ್ರ್ಯತೆ ಕಾಪಾಡುವ ಧ್ಯೇಯದೊಂದಿಗೆ ನ.6 ರಿಂದ ನ.14ರವರೆಗೆ ಶೃಂಗೇರಿಯಿಂದ ಹರಿಹರದವರೆಗೆ ಪಾದಯಾತ್ರೆ ನಡೆಸಲಾಗುತ್ತದೆ. ನ.11ರಂದು ಶಿವಮೊಗ್ಗ ನಗರದಲ್ಲಿ ಪಾದಯಾತ್ರೆ ಸಾಗಲಿದೆ ಎಂದು ಪ್ರೊ. ಬಿ.ಎಂ.ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಶಿವಮೊಗ್ಗಕ್ಕೆ ನ.11ಕ್ಕೆ ಪಾದಯಾತ್ರೆ
ಪತ್ರಿಕಾ ಭವನ : ರೈತರು, ಮಠ, ಮಂದಿರಗಳಿಗೆ ವಕ್ಫ್ ನೀಡಿರುವ ನೊಟೀಸ್ ಹಿಂಪಡೆದರೆ ಸಾಲು. ಪಹಣಿಯಲ್ಲಿ ನಮೂದಾಗಿರುವ ವಕ್ಫ್ ಆಸ್ತಿ ಎಂಬ ಅಂಶವನ್ನು ತೆಗೆಯಬೇಕು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹ.ಪಹಣಿಯಲ್ಲಿ ಬದಲಾಯಿಸಿ, ಈಶ್ವರಪ್ಪ ಪಟ್ಟು
ಪತ್ರಿಕಾ ಭವನ : ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ, ಪರ್ಯಾವರಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳು ನಡೆಸುತ್ತಿರುವ ನಿರ್ಮಲ ತುಂಗಭದ್ರ ಅಭಿಯಾನಕ್ಕೆ ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಬೆಂಬಲ ನೀಡುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದೇವೆ ಎಂದು ಐಎಂಎ ಜಿಲ್ಲಾಧ್ಯಕ್ಷ ಡಾ. ಎಸ್.ಶ್ರೀಧರ್ ತಿಳಿಸಿದರು.ಪಾದಯಾತ್ರೆಗೆ ಐಎಂಎ ಬೆಂಬಲ
ಪತ್ರಿಕಾ ಭವನ : ಸಚಿವ ಜಮೀರ್ ಜಮೀರ್ ಅಹಮದ್ ಶಿವಮೊಗ್ಗಕ್ಕೆ ಬಂದರೆ ಜನ ಹೊಡೆಯುತ್ತಾರೆ ಎಂದು ಶಾಸಕ ಚನ್ನಬಸಪ್ಪ ಹೇಳಿದ್ದಾರೆ. ಈ ಮೂಲಕ ಅಶಾಂತಿ ಸೃಷ್ಟಿಗೆ ಕಾರಣವಾಗುತ್ತಿದ್ದಾರೆ. ಈ ರೀತಿಯ ಹೇಳಿಕೆ ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿ ತೋರಿಸುತ್ತದೆ. ಉಪ ಚುನಾವಣೆ ಬಳಿಕ ಸಚಿವ ಜಮೀರ್ ಅಹಮದ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದು, ಅದ್ಧೂರಿ ಸ್ವಾಗತ ನೀಡಲಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‘ಶಾಸಕ ಚನ್ನಬಸಪ್ಪ ಅಶಾಂತಿ ಸೃಷ್ಟಿಸುತ್ತಿದ್ದಾರೆʼ
Shimoga City News
ಇದನ್ನೂ ಓದಿ » ಅಡಿಕೆ ಧಾರಣೆ | 4 ನವೆಂಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?