ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021
ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ವಾಹನಗಳ ಸಂಖ್ಯೆ ಸಂಪೂರ್ಣ ತಗ್ಗಿದೆ. ಪ್ರಮುಖ ರಸ್ತೆಗಳಲ್ಲಿ ಜನ ಮತ್ತು ವಾಹನ ಸಂಚಾರ ವಿರಳವಾಗಿತ್ತು.
ಬಿ.ಹೆಚ್.ರಸ್ತೆ, ನೆಹರೂ ರೋಡ್, ಸವಳಂಗ ರಸ್ತೆ, ಸಾಗರ ರಸ್ತೆ ಸೇರಿದಂತೆ ನಗರದಾದ್ಯಂತ ವಾಹನಗಳ ಸಂಖ್ಯೆ ಕಡಿಮೆಯಾಗಿದೆ. ಲಾಕ್‍ಡೌನ್ ಮಾದರಿ ಕರ್ಫ್ಯೂ ಜಾರಿಯಾದಾಗಿನಿಂದ ಇದೇ ಮೊದಲ ಬಾರಿಗೆ ವಾಹನ ಸಂಖ್ಯೆ ಇಷ್ಟೊಂದು ಪ್ರಮಾಣದಲ್ಲಿ ತಗ್ಗಿದೆ.
ವಾಹನಗಳ ಸಂಖ್ಯೆ ತಗ್ಗಿದ್ದೇಕೆ?
ಶಿವಮೊಗ್ಗ ನಗರದಾದ್ಯಂತ ಪೊಲೀಸರು ಎಲ್ಲೆಡೆ ಬ್ಯಾರಿಕೇಡ್ ಹಾಕಿದ್ದಾರೆ. ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತಿದ್ದಾರೆ. ಇದರಿಂದ ವಾಹನಗಳ ಸಂಖ್ಯೆ ಸಂಪೂರ್ಣ ಕಡಿಮೆಯಾಗಿದೆ.
ಆಂಬುಲೆನ್ಸ್, ವೈದ್ಯಕೀಯ ಸೇವೆ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ಅಗತ್ಯ ಮತ್ತು ತುರ್ತು ಸೇವೆಯಲ್ಲಿ ತೊಡಗಿರುವವರು ಮಾತ್ರ ಸಂಚರಿಸಲು ಅವಕಾಶವಿದೆ. ಹಾಗಾಗಿ ಉಳಿದವರು ರಸ್ತೆಗಿಳಿದಿದ್ದರೆ ಪರಿಶೀಲನೆ ನಡೆಸಿ, ವಾಹನಗಳನ್ನು ವಶಕ್ಕೆ ಪಡೆದರು.
ಹತ್ತು ಗಂಟೆವರೆಗೆ ರೋಡ್ ಜಾಮ್
ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಅಗತ್ಯ ವಸ್ತುಗಳ ಖರೀದಿಗೆ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಇದರಿಂದ ಬಿ.ಹೆಚ್.ರಸ್ತೆ, ಅಮೀರ್ ಅಹಮದ್ ಸರ್ಕಲ್‍ನಲ್ಲಿ ರಸ್ತೆ ಸಂಚರ ದಟ್ಟಣೆ ಉಂಟಾಗಿತ್ತು. ಹತ್ತು ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸಿ, ಜನರು ಮನೆಗೆ ತೆರಳುವಂತೆ ಸೂಚಿಸಿದರು. ಆ ಬಳಿಕ ನಗರದಾದ್ಯಂತ ಬಿಗಿ ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422