ಸಿದ್ದರಾಮಯ್ಯ ಅಮೃತ ಮಹೋತ್ಸಕ್ಕೆ ಶಿವಮೊಗ್ಗದಿಂದ ಸಾವಿರ ಸಾವಿರ ಜನ

Published On : ಆಗಷ್ಟ್ 2, 2022

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS

ಶಿವಮೊಗ್ಗ | ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಜಿಲ್ಲೆಯಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ (CONGRESS) ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದ್ದಾರೆ.

Shimoga Nanjappa Hospital

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಎಸ್.ಸುಂದರೇಶ್ (CONGRESS) ಅವರು, ಸಿದ್ದರಾಮೋತ್ಸವ ಒಂದು ಅಪರೂಪದ ಉತ್ಸವವಾಗಲಿದೆ. ಜಿಲ್ಲೆಯಿಂದ ಸುಮಾರು 30 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. ಕೆ.ಎಸ್.ಆರ್.ಟಿ.ಸಿ ಸೇರಿದಂತೆ 300ಕ್ಕೂ ಹೆಚ್ಚು ಬಸ್‌ಗಳನ್ನು ಈಗಾಗಲೇ ಬುಕ್ ಮಾಡಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ 100ಕ್ಕೂ ಹೆಚ್ಚು ಟಿ.ಟಿ.ಗಳನ್ನು ಬುಕ್ ಮಾಡಲಾಗಿದೆ. ಪ್ರತಿ ವಾರ್ಡ್‌ಗೆ 2 ಬಸ್‌ಗಳಂತೆ ಶಿವಮೊಗ್ಗ ದಿಂದ ಹೊರಡಲಿವೆ. ಶಿವಮೊಗ್ಗ ನಗರ ಒಂದರಲ್ಲಿಯೇ 70ಕ್ಕೂ ಹೆಚ್ಚು ಬಸ್‌ಗಳು ಹೊರಡುತ್ತವೆ. ಇದರ ಜೊತೆಗೆ ಖಾಸಗಿ ವಾಹನಗಳಲ್ಲೂ ಕೂಡ ಅಭಿಮಾನಿಗಳು ತೆರಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಿದ್ದರಾಮೋತ್ಸವಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಬಾರಿ ಜಿಲ್ಲೆಯಲ್ಲಿ ಸಭೆಗಳನ್ನು ಮಾಡಲಾಗಿತ್ತು. ರೂಪುರೇಷೆಗಳನ್ನ ತೆಗೆದುಕೊಳ್ಳಲಾಗಿತ್ತು. ಜಿಲ್ಲೆಯ ಎಲ್ಲ ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಜನ ಪ್ರತಿನಿಧಿಗಳು, ಮುಖ್ಯವಾಗಿ ಕಾರ್ಯಕರ್ತರು ಎಲ್ಲರೂ ತವರು ಮನೆಯ ಹಬ್ಬದ ಸಂಭ್ರಮಕ್ಕೆ ಹೊರಟಂತೆ ತಯಾರಾಗಿದ್ದಾರೆ. ಇದೊಂದು ಅದ್ಭುತ ಕಾರ್ಯಕ್ರಮವಾಗಲಿದೆ ಎಂದು ಹೆಚ್.ಎಸ್.ಸುಂದರೇಶ್ ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಡುವು ನೀಡಿದ ಮಳೆ, ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ ಆಚರಣೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಆಗಷ್ಟ್ 2, 2022

Leave a Comment