SHIVAMOGGA LIVE NEWS | 22 FEBRURARY 2023
SHIMOGA : ಭದ್ರಾವತಿಯ VISL ಕಾರ್ಖಾನೆಯ ಉಳಿವಿಗಾಗಿ ಸರ್ಎಂವಿ ರಸ್ತೆಯ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಶಿವಮೊಗ್ಗ ಮಹಾನಗರ ಪಾಲಿಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮಲೆನಾಡಿನ ಹೆಮ್ಮೆಯ ಉಕ್ಕು ಹಾಗೂ ಕಬ್ಬಿಣದ ಕೈಗಾರಿಕೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರುದ. ಆತ್ಮನಿರ್ಭರ ಹಾಗೂ ಮೇಕಿನ್ ಇನ್ ಇಂಡಿಯಾ ಯೋಜನೆಯ ಪ್ರತಿಪಾದಕರಾದ ಪ್ರಧಾನಿ ಮೋದಿ ಅವರು ದೇಶದ ಪುರಾತನ ಯೋಜನೆಗೆ ಅಗತ್ಯ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ಮೋದಿಯವರು ಶಿವಮೊಗ್ಗಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಮ್ಮ ಜಿಲ್ಲೆಯ ಹೆಮ್ಮೆಯ VISL ಕಾರ್ಖಾನೆ ಉಳಿಸಲು ಸಹಕರಿಸಬೇಕೆಂದು ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಈವರೆಗಿನ ಟಾಪ್ 10 ನ್ಯೂಸ್ | ಈ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ರೇಖಾ ರಂಗನಾಥ್, ಸದಸ್ಯರಾದ ಬಿ.ಎ.ರಮೇಶ್ ಹೆಗ್ಡೆ, ಹೆಚ್.ಸಿ.ಯೋಗೀಶ್, ಆರ್.ಸಿ.ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೆಹೆಕ್ ಷರೀಫ್, ಮುಖಂಡರಾದ ಕೆ.ರಂಗನಾಥ್, ಜಗದೀಶ್ ಇದ್ದರು.