ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ (Judge) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನ್ಯಾ.ಮಂಜುನಾಥ್ ನಾಯಕ್ ಅವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಉಚ್ಚನ್ಯಾಯಾಲಯವು ವರ್ಗಾವಣೆ ಮಾಡಿ ಆದೇಶಿಸಿದೆ.
ಮಂಜುನಾಥ್ ನಾಯಕ್ ಅವರು ತಮ್ಮ ಸೇವಾ ಅವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದ ಒಟ್ಟು 1,21,499 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ವಿಲೇ ಮಾಡಿದ್ದಾರೆ. ವಿವಿಧ ಹುದ್ದೆಗಳಿಗೆ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಸೇವೆಯಲ್ಲಿದ್ದ 54 ಸಿಬ್ಬಂದಿಯ ಸೇವೆಯನ್ನು ಪರಿಶೀಲಿಸಿ ಅವರಿಗೆ ಮುಂಬಡ್ತಿ ನೀಡಿದ್ದಾರೆ.
ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 69 ಸಿಬ್ಬಂದಿ ತೃಪ್ತಿಕರವಾಗಿ ಪ್ರೊಬೇಷನ್ ಆವಧಿಯನ್ನು ಪೂರ್ಣಗೊಳಿಸಿರುತ್ತಾರೆ ಎಂದು ಆದೇಶ ಹೊರಡಿಸಿ ಅಂತಹ ಸಿಬ್ಬಂದಿಯನ್ನು ಸಾರ್ವಜನಿಕ ಸೇವೆ ಯಲ್ಲಿ ಕಾಯಂಗೊಳಿಸಿ ಆದೇಶಿಸಿದ್ದಾರೆ.

ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್.
ಪದಗ್ರಹಣ ಮಾಡಿದ ದಿನದಿಂದ ಇದುವರೆಗೆ ಹಲವು ಪ್ರಮುಖ ಪ್ರಕರಣಗಳಲ್ಲಿ ತೀರ್ಪು ನೀಡಿ ಉಚ್ಛ ನ್ಯಾಯಾಲಯ ನಿಗದಿಪಡಿಸಿದ ನಿಯಮಕ್ಕಿಂತ ಮೂರು ಪಟ್ಟು ಅಧಿಕ ಪ್ರಕರಣಗಳಲ್ಲಿ ಆದೇಶ ನೀಡಿ ವಿಲೇಗೊಳಿಸಿದ್ದಾರೆ.
ಇದನ್ನೂ ಓದಿ » ಕರೆಂಟ್ ಶಾಕ್, ಅಡಿಕೆ ಗೊನೆಗಾರ ಸಾವು, ಹೇಗಾಯ್ತು ಘಟನೆ?






