ಶಿವಮೊಗ್ಗ ದಸರಾ: ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಈ ಬಾರಿ ಶಿವಮೊಗ್ಗ ದಸರಾ (Shimoga Dasara) ಉದ್ಘಾಟಿಸಲಿದ್ದಾರೆ. ಸೆ.22ರಂದು ಬೆಳಗ್ಗೆ 11 ಗಂಟೆಗೆ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾದ ಮಧು ಬಂಗಾರಪ್ಪ, ಬಿ.ಎಸ್.ಸುರೇಶ್, ರಹೀಂ ಖಾನ್, ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ. ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಎಂಎಲ್‌ಎ ಎನೇನು ಹೇಳಿದರು
ಮಹಾನಗರ ಪಾಲಿಕೆ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಸ್.ಎನ್.ಚನ್ನಬಸಪ್ಪ, ಈ ಬಾರಿ ಹನ್ನೊಂದು ದಿನ ಉತ್ಸವ ನಡೆಯಲಿದೆ. ಶಿವಮೊಗ್ಗದಲ್ಲಿ ವಿಜೃಂಭಣೆಯ ದಸರಾ ನಡೆಯಲಿದೆ. ದಸರಾ ಉದ್ಘಾಟನೆಗೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ ರಾಜು ಅವರನ್ನು ಆಹ್ವಾನಿಸಲಾಗಿದೆ. ಸೈನ್ಯಕ್ಕೆ ಶಕ್ತಿ ನೀಡಿ, ಹಲವು ಸಾಹಸಗಳನ್ನು ಮಾಡಿದ್ದಾರೆ. ಯುವಕರಿಗೆ ಸ್ಪೂರ್ತಿಯಾಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣ ಗೌಡ ಸೇರಿ ಪಾಲಿಕೆಯ ಅಧಿಕಾರಿಗಳು ಇದ್ದರು.
ಇದನ್ನೂ ಓದಿ » ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ, ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಇರಲಿದೆ?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





