ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2020
ಶಿವಮೊಗ್ಗದಲ್ಲಿ ನಾಡಹಬ್ಬ ಅದ್ಧೂರಿ ಚಾಲನೆ ಸಿಕ್ಕಿದೆ. ಮಹಾನಗರ ಪಾಲಿಕೆಯಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ, ದಸರಾ ಆಚರಣೆಗೆ ಚಾಲನೆ ನೀಡಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್, ಸದಸ್ಯರು, ಕಮಿಷನರ್, ಪಾಲಿಕೆಯ ಸಿಬ್ಬಂದಿಗಳು ನಾಡದೇವಿಯ ಪೂಜೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಕಟ್ಟಡದಲ್ಲಿ ಚಾಮುಂಡೇಶ್ವರಿ ಮೂರ್ತಿ, ಅಂಬಾರಿಗೆ ಪೂಜೆ ಸಲ್ಲಿಸಲಾಯಿತು.
ಬಳಿಕ ಅಂಬಾರಿಯನ್ನು ಕೋಟೆ ರಸ್ತೆಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತರಲಾಗುತ್ತದೆ. ಇಲ್ಲಿ ಕರೋನ ವಾರಿಯರ್ಸ್ ಕಡೆಯಿಂದ ಈ ಬಾರಿ ಶಿವಮೊಗ್ಗ ದಸರಾಗೆ ಚಾಲನೆ ನೀಡಲಾಗುತ್ತದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]