ಶಿವಮೊಗ್ಗ ಲೈವ್.ಕಾಂ | SHIMOGA | 30 ಸೆಪ್ಟೆಂಬರ್ 2019

ಶಿವಮೊಗ್ಗ ದಸರಾ ಚಲನಚಿತ್ರೋತ್ಸವಕ್ಕೆ ಇವತ್ತು ಚಾಲನೆ ಸಿಕ್ಕಿದೆ. ನಗರದ ಮಂಜುನಾಥ ಟಾಕೀಸ್’ನಲ್ಲಿ ಚಿತ್ರೋತ್ಸವವನ್ನು ನಟಿಯರು ಉದ್ಘಾಟನೆ ಮಾಡಿದ್ದಾರೆ.
![]() |
ನಟಿ ಭಾವನಾ ರಾವ್ ಮತ್ತು ದಿವ್ಯಾ ಉರುಡುಗ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದರು. ನಟಿಯರನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ಯುವಕರು ಸೇರಿದ್ದರು.
ಐದು ದಿನ ಸಿನಿಮಾ ಹಬ್ಬ
ದಸರಾ ಚಲನಚಿತ್ರೋತ್ಸವದಲ್ಲಿ ಐದು ದಿನ ವಿವಿಧ ಸಿನಿಮಾಗಳನ್ನು ಪ್ರದರ್ಶಿಸಲಾಗುತ್ತಿದೆ. ಆರಂಭದಲ್ಲಿ ಮಂಜುನಾಥ ಟಾಕೀಸ್’ನಲ್ಲಿ ಬೆಲ್ ಬಾಟಮ್, ಅ.1ರಂದು ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ನಟ ಸಾರ್ವಭೌಮ, ಅ.2ರಂದು ಲಕ್ಷ್ಮೀ ಚಿತ್ರಮಂದಿರದಲ್ಲಿ ಪ್ರೀಮಿಯರ್ ಪದ್ಮಿನಿ, ಅ.3ರಂದು ಮಾರ್ಡನ್ ಚಿತ್ರಮಂದಿರದಲ್ಲಿ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಅ.4ರಂದು ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ನಾತಿಚರಾಮಿ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಪ್ರತಿದಿನ ಬೆಳಗ್ಗೆ 8.30ಕ್ಕೆ ಸಿನಿಮಾ ಆರಂಭವಾಗಲಿದ್ದು, ಉಚಿತ ಪ್ರವೇಶವಿದೆ.

ಮೇಯರ್ ಲತಾ ಗಣೇಶ್, ಉಪಮೇಯರ್ ಚನ್ನಬಸಪ್ಪ, ಪಾಲಿಕೆ ಸದಸ್ಯರು, ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200