BREAKING NEWS | ಶಿವಮೊಗ್ಗ ದಸರಾ ಜಂಬೂ ಸವಾರಿಗೆ ವಿದ್ಯುಕ್ತ ಚಾಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಶಿವಮೊಗ್ಗ ದಸರಾ ಜಂಬೂ ಸವಾರಿಗೆ (DASARA JAMBOO SAVARI) ಚಾಲನೆ ನೀಡಲಾಯಿತು. ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಂದಿ ಕೋಲಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

Shimoga Nanjappa Hospital

ಸಕ್ರೆಬೈಲಿನ ಸಾಗರ ಆನೆ ನಾಡ ದೇವಿ ಚಾಮುಂಡೇಶ್ವರಿ ಮೂರ್ತಿ ಮುತ್ತು ಬೆಳ್ಳಿ ಅಂಬಾರಿಯನ್ನು ಹೊತ್ತು ಹೆಜ್ಜೆ ಹಾಕುತ್ತಿದ್ದಾನೆ.

ನಂದಿ ಕೋಲಿಗೆ ಪೂಜೆ DASARA JAMBOO SAVARI

ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಮಹಾನಗರ ಪಾಲಿಕೆಯ ಜನಪ್ರತಿನಿಧಿಗಳು, ಅಧಿಕಾರಿಗಳು ನಂದಿ ಕೋಲಿಗೆ ಪೂಜೆ ಸಲ್ಲಿಸಿದರು. ನಾಡ ದೇವಿಯನ್ನು ಹೊತ್ತ ಗಜಪಡೆಗು ಪೂಜೆ ಸಲ್ಲಿಸಲಾಯಿತು. ಆ ಬಳಿಕ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇಗುಲದ ಮುಂಭಾಗ ಅಂಬಾರಿ ಹೊತ್ತ (DASARA JAMBOO SAVARI) ಗಜಪಡೆಗೆ ಪುಷ್ಪಾರ್ಚನೆ ನೆರವೇರಿಸಲಾಯಿತು.

ಗಜ ಗಾಂಭೀರ್ಯದಲ್ಲಿ ಹೆಜ್ಜೆ DASARA JAMBOO SAVARI

ಸಕ್ರೆಬೈಲಿನ ಸಾಗರ ಆನೆ ಅಂಬಾರಿ ಹೊತ್ತು ಸಾಗುತ್ತಿದೆ. ಭಾನುಮತಿ ಮತ್ತು ನೇತ್ರಾವತಿ ಆನೆಗಳು ಸಾಗರ ಆನೆಯ ಅಕ್ಕಪಕ್ಕದಲ್ಲಿ ಹೆಜ್ಜೆ ಹಾಕುತ್ತಿವೆ. ಈ ಮೂಲಕ ಶಿವಮೊಗ್ಗ ದಸರಾದ ಮೆರಗು ಹೆಚ್ಚಿಸಿವೆ. ವಿವಿಧ ಕಲಾತಂಡಗಳು ಕೂಡ ಮೆರವಣಿಗೆಯಲ್ಲಿ ಭಾಗವಹಿಸಿವೆ.

ಆನೆ ಮೇಲೆ ಅಂಬಾರಿಯನ್ನು ಕಣ್ತುಂಬಿಕೊಂಡು ಜನರು ಭಕ್ತಿ ಭಾವದಿಂದ ನಮನ ಸಲ್ಲಿಸುತ್ತಿದ್ದಾರೆ. ಮೊಬೈಲ್ ಗಳ ಮೂಲಕ ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

ಮೆರವಣಿಗೆ ಹಾದಿಯುದ್ದಕ್ಕು ಜನ ಸಾಗರ

ಕೋಟೆ ರಸ್ತೆಯಲ್ಲಿ ಮೆರವಣಿಗೆ ಆರಂಭವಾಗಿದೆ. ಕೋಟೆ ರಸ್ತೆಯ ಮೂಲಕ ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪ ನಾಯಕ ಪ್ರತಿಮೆ, ಎ.ಎ.ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಜೈಲ್ ರಸ್ತೆ ತಲುಪಲಿದೆ. ಅಲ್ಲಿಂದ ಫ್ರೀಡಂ ಪಾರ್ಕ್ ಗೆ ಮೆರವಣಿಗೆ ಆಗಮಿಸಲಿದೆ.

shimoga dasara jamboo savari

shimoga dasara jamboo savari

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗಕ್ಕೆ ನೂತನ ರಕ್ಷಣಾಧಿಕಾರಿ, ಅಧಿಕಾರ ವಹಿಸಿಕೊಂಡ ಬಳಿಕ ಹೇಳಿದ 2 ಪ್ರಮುಖಾಂಶವೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment