ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಸೆಪ್ಟೆಂಬರ್ 2021
ಶಿವಮೊಗ್ಗ ನಗರದಲ್ಲಿ ಮೈಸೂರು ಮಾದರಿಯಲ್ಲಿ ಒಂಭತ್ತು ದಿನ ವೈಭವ ಮತ್ತು ಸಾಂಪ್ರದಾಯಿಕವಾಗಿ ದಸರಾ ಆಚರಿಸಲು ನಿರ್ಧರಿಸಲಾಗಿದೆ. ಎರಡು ಕೋಟಿ ರೂ. ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕರೋನ ಹಿನ್ನೆಲೆ ಸರ್ಕಾರದ ಮಾರ್ಗಸೂಚಿ ಪ್ರಕಟವಾದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲು ಯೋಜಿಸಲಾಗಿದೆ.
ಮಹಾನಗರ ಪಾಲಿಕೆ ಸಭಾಂಗಣದಲ್ಲಿ ದಸರಾ ಆಚರಣೆ ಪೂರ್ವಭಾವಿ ಸಭೆ ನಡೆಸಲಾಯಿತು. ಮೇಯರ್ ಸುನೀತಾ ಅಣ್ಣಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಶಿವಮೊಗ್ಗ ನಗರದಲ್ಲೂ ಮೈಸೂರು ಮಾದರಿಯಲ್ಲಿ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಯಿತು.
ಎರಡು ಕೋಟಿ ರೂ.ಗೆ ಪ್ರಸ್ತಾವನೆ
ಶಿವಮೊಗ್ಗದಲ್ಲಿ ದಸರಾ ಆಚರಣೆಗೆ ಸರ್ಕಾರದ ಅನುದಾನದ ಅವಶ್ಯತೆ ಇದೆ. ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ದಸರಾ ಆಚರಣೆ ಸಂಬಂಧ ಸರ್ಕಾರ ಪ್ರಕಟಿಸುವ ಮಾರ್ಗಸೂಚಿ ಆಧಾರದ ಮೇಲೆ ಕಾರ್ಯಕ್ರಮಗಳನ್ನು ರೂಪಿಸಲು ನಿರ್ಧರಿಸಲಾಯಿತು.
ಒಂಭತ್ತು ದಿನ ವೈಭವದ ಆಚರಣೆ
ಕರೋನ ಹಿನ್ನೆಲೆ ದಸರಾ ಆಚರಣೆಗೆ ತೊಡಕುಂಟಾಗಿತ್ತು. ಈ ಭಾರಿ ಒಂಭತ್ತು ದಿನವು ವೈಭವದಿಂದ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಕರೋನ ಪ್ರಕರಣಗಳು ಈಗಲೂ ವರದಿಯಾಗುತ್ತಿವೆ. ಹಾಗಾಗಿ ಶಿವಮೊಗ್ಗ ದಸರಾದಲ್ಲಿ ಯಾವುದೆ ಕಾರ್ಯಕ್ರಮಗಳನ್ನು ಆಯೋಜಿಸುವುದು ಬೇಡ ಎಂದು ತೀರ್ಮಾನಿಸಲಾಯಿತು. ಸರ್ಕಾರದ ಮಾರ್ಗಸೂಚಿ ಪ್ರಕಟವಾದ ಬಳಿಕ ವಿವಿಧ ಸಮಿತಿಗಳನ್ನು ರಚಿಸಿ, ಆಚರಣೆಗೆ ತಯಾರಿ ಮಾಡಲು ನಿರ್ಧರಿಸಲಾಯಿತು.
ಉಪಮೇಯರ್ ಶಂಕರ್ ಗನ್ನಿ, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಕಾರ್ಪೊರೇಟರ್’ಗಳು ಸಭೆಯಲ್ಲಿ ಭಾಗವಹಿಸಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422