ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021
ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ಕರೋನ ಸೋಂಕು ತಗುಲಿದೆ. ರೋಗ ಲಕ್ಷಣವಿಲ್ಲದ ಪಾಸಿಟಿವ್ ಬಂದ ಹಿನ್ನೆಲೆ, ಜಲ್ಲಾಧಿಕಾರಿಯವರು ಹೋಂ ಐಸೊಲೇಷನ್‍ಗೆ ಒಳಗಾಗಿದ್ದಾರೆ.
ಕರೋನ ತುರ್ತು ಸಂದರ್ಭ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡಿದ್ದರು. ಪರಿಸ್ಥಿತಿ ನಿಭಾಯಿಸುವ ಕುರಿತು ಅಧಿಕಾರಿಗಳು ಸಭೆ ನಡೆಸಿದ್ದರು. ಮೆಗ್ಗಾನ್ ಆಸ್ಪತ್ರೆಗೂ ಭೇಟಿ ನೀಡುತ್ತಿದ್ದರು. ಈ ನಡುವೆ ಅವರಿಗೆ ಸೋಂಕು ತಗುಲಿದ್ದು, ಮನೆಯಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಳೆದ ವರ್ಷ ಪ್ರಾಥಮಿಕ ಸಂಪರ್ಕಕ್ಕೆ ಒಳಗಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೋಂ ಐಸೊಲೇಷನ್‍ಗೆ ಒಳಗಾಗಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದವರೊಬ್ಬರಿಗೆ ಸೋಂಕು ತಗುಲಿತ್ತು. ಈ ಬಾರಿ ರೋಗ ಲಕ್ಷಣವಿಲ್ಲದಿದ್ದರೂ ಪಾಸಿಟಿವ್ ಬಂದ ಹಿನ್ನೆಲೆ ಹೋಂ ಐಸೊಲೇಷನ್‍ಗೆ ಒಳಗಾಗಿದ್ದಾರೆ.
ಬೇಗ ಗುಣವಾಗಿ ಬನ್ನಿ
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಶೀಘ್ರ ಗುಣವಾಗಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹಾರೈಸಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪೋಸ್ಟ್ ಪ್ರಕಟಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





