ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 JUNE 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಚುನಾವಣೆ (election) ಆರಂಭವಾಗಿದೆ. ಬಾಲರಾಜ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ ಆವರಣದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈಗಾಗಲೆ ಒಬ್ಬ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಉಳಿದ 12 ನಿರ್ದೇಶಕರ ಆಯ್ಕೆಗೆ ಮತದಾನ ನಡೆಯುತ್ತಿದೆ.
ಮತ ಚಲಾಯಿಸಿದ ಸಂಸದ ರಾಘವೇಂದ್ರ
ಡಿಸಿಸಿ ಬ್ಯಾಂಕ್ ಆವರಣದಲ್ಲಿ ಬೆಳಗ್ಗೆಯಿಂದಲೆ ಮತದಾನ ಪ್ರಕ್ರಿಯೆ ಬಿರುಸಾಗಿದೆ. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರು ತಮ್ಮ ಹಕ್ಕು ಚಲಾಯಿಸಿದರು. ಅಹಿತಕರ ಘಟನೆ ತಡೆಯಲು ಮತಗಟ್ಟೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದನ್ನೂ ಓದಿ – ತೀವ್ರ ಕುತೂಹಲ ಮೂಡಿಸಿದೆ ಡಿಸಿಸಿ ಬ್ಯಾಂಕ್ ಚುನಾವಣೆ, ಕಣದಲ್ಲಿದ್ದಾರೆ 28 ಅಭ್ಯರ್ಥಿಗಳು, ಇಲ್ಲಿದೆ ಲಿಸ್ಟ್
ಇನ್ನು, ಮತದಾನ ಮಾಡಲು ತೆರಳುವವರು ತಮ್ಮ ಮೊಬೈಲ್ ಫೋನ್ಗಳನ್ನು ಮತಗಟ್ಟೆಯೊಳಗೆ ಕೊಂಡೊಯ್ಯುವಂತಿಲ್ಲ. ಆದ್ದರಿಂದ ಡಿಸಿಸಿ ಬ್ಯಾಂಕ್ ಆವರಣದಲ್ಲಿಯೇ ಮೊಬೈಲ್ಗಳನ್ನು ಪಡೆದು, ಅದರ ಮೇಲೆ ಹೆಸರು ಬರೆದಿಡಲಾಗುತ್ತಿದೆ. ಮತ ಚಲಾಯಿಸಿ ಬಂದ ಮೇಲೆ ಮೊಬೈಲ್ ಹಿಂತಿರುಗಿಸಲಾಗುತ್ತಿದೆ.
ಸಂಜೆಯೇ ಫಲಿತಾಂಶ ಪ್ರಕಟ
12 ನಿರ್ದೇಶಕರ ಆಯ್ಕೆಗೆ ಮತದಾನ ಆರಂಭವಾಗಿದೆ. ಒಟ್ಟು 27 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿ ಹಲವರು ಕಣದಲ್ಲಿದ್ದಾರೆ. ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಸಂಜೆ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ – ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಜೋಗ, ಮೈದುಂಬಿದ ರಾಜ, ರಾಣಿ, ರೋರರ್, ರಾಕೆಟ್