ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 AUGUST 2023
SHIMOGA : ಗುಡ್ಡೇಕಲ್‌ನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಆಡಿಕೃತ್ತಿಕೆ ಜಾತ್ರೆ (Harohara Jathre) ವಿಜೃಂಭಣೆಯಿಂದ ನಡೆಯುತ್ತಿದೆ. ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಕಾವಡಿ ಹೊತ್ತು ಬಂದು ದೇವರಿಗೆ ಹರಕೆ ತೀರಿಸಿದರು. ಇವತ್ತಿನ ಜಾತ್ರೆ ವೈಭವದ ಫೋಟೊ ಆಲ್ಬಂ ಇಲ್ಲಿದೆ.

ಜಾತ್ರೆ ಹಿನ್ನೆಲೆ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು.

ಆಡಿಕೃತ್ತಿಕೆ ಜಾತ್ರೆ ಹಿನ್ನೆಲೆ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾಕ್ಕೆ ದೊಡ್ಡ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ.

ಜಾತ್ರೆ ಹಿನ್ನೆಲೆ ಮಹಿಳೆಯರು, ಮಕ್ಕಳು ಸೇರಿದಂತೆ ದೊಡ್ಡ ಸಂಖ್ಯೆಯ ಭಕ್ತರು ಕಾವಡಿ ಹೊತ್ತು ಬಂದು ಹರಕೆ ತೀರಿಸಿದರು.

.jpeg)





.jpeg)


ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆ ಶುರು, ಬೆಳಗ್ಗೆಯಿಂದಲೆ ಕಾವಡಿ ಹೊತ್ತು ಬರ್ತಿದ್ದಾರೆ ಭಕ್ತರು


ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಆದಿಚುಂಚನಗಿರಿ ಮಠದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಭೇಟಿ ನೀಡಿದ್ದರು. ಈ ವೇಳೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
.jpeg)
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






