ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 24 APRIL 2023
SHIMOGA : ಕೇಂದ್ರ ಕಾರಾಗೃಹದ ಕೈದಿಯೊಬ್ಬ(Prisoner) ಅನಾರೋಗ್ಯದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಆದರೆ ಇದು ಕೊಲೆ ಎಂದು ಆತನ ಕುಟುಂಬದವರು ಆರೋಪ ಮಾಡಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
il
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕಲೀಂ (37) ಮೃತ ಕೈದಿ. ಪೋಕ್ಸೊ ಕಾಯ್ದೆ ಅಡಿ ಪ್ರಕರಣವೊಂದರಲ್ಲಿ ಒಂದು ತಿಂಗಳ ಹಿಂದೆ ಕಲೀಂ ಬಂಧಿತನಾಗಿದ್ದ. ಈತನಿಗೆ ಶನಿವಾರ ವಾಂತಿ ಮತ್ತು ಭೇದಿಯಾಗಿ ರಕ್ತದ ಒತ್ತಡ ಕುಸಿದಿತ್ತು. ಈ ಹಿನ್ನೆಲೆ ಕಲೀಂನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
‘ಹೊಡೆದು ಕೊಂದಿದ್ದಾರೆ’
ಕಲೀಂ ಸಾವಿನ ಕುರಿತು ಆತನ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿ ಆತನನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಲಾಗಿದೆ. ತೀವ್ರ ಗಾಯಗೊಂಡಿದ್ದರಿಂದ ಆತ ಮೃತಪಟ್ಟಿದ್ದಾನೆ. ಈಗ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಈ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕುಟುಂದವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ – ಲಾರಿ ಪಲ್ಟಿ, ಸಿಲಿಂಡರ್ಗಳು ಚೆಲ್ಲಾಪಿಲ್ಲಿ, ತಪ್ಪಿದ ದುರಂತ