ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ರೈತರು, ಯೋಧರ ಬದುಕಿಗೆ ಅಡ್ಡಿ ಆತಂಕಗಳು ಉಂಟಾದರೆ ಎದೆ ಕೊಟ್ಟು ನಿಲ್ಲಬೇಕಾದ್ದು ನಮ್ಮೆಲ್ಲರ ಕರ್ತವ್ಯ ಎಂದು ಶಿವಮೊಗ್ಗ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ವಿಜಯದೇವಿ ತಿಳಿಸಿದರು.
ಗೋಪಿಶೆಟ್ಟಿಕೊಪ್ಪ ಬಡಾವಣೆಯ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಸಾಹಿತ್ಯ ಭವನದಲ್ಲಿ ಆಯೋಜಿಸಿರುವ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೆಲವನ್ನು ಕಾಯುವ ಯೋಧ, ಅನ್ನ ನೀಡುವ ರೈತರ ಸಂರಕ್ಷಣೆ, ಸುರಕ್ಷತೆಯ ಹೊಣೆ ಸರ್ಕಾರ ಮತ್ತು ನಮ್ಮೆಲ್ಲರದ್ದಾಗಿದೆ. ಅವರ ಬದುಕಿಗೆ ಅಡ್ಡಿ ಉಂಟಾದರೆ ಎಲ್ಲರು ಅವರೊಂದಿಗೆ ನಿಲ್ಲಬೇಕಿದೆ ಎಂದರು.
ಸಮಗ್ರ ಸಾಂಸ್ಕೃತಿಕ ಇತಿಹಾಸ ಪುನರ್ ರೂಪಿಸಿ
ಶಿವಮೊಗ್ಗ ಜಿಲ್ಲೆಯ ಸಮಗ್ರ ಸಾಂಸ್ಕೃತಿಕ ಇತಿಹಾಸವನ್ನು ಪುನರ್ ರೂಪಿಸುವ ಕೆಲಸವಾಗಬೇಕಿದೆ. ಜಿಲ್ಲೆಯ ಏಳು ತಾಲೂಕುಗಳಲ್ಲಿ ಶಾಸನಗಳ ಅಧ್ಯಯನ ಆಗಬೇಕಿದೆ. ಕುವೆಂಪು ವಿಶ್ವವಿದ್ಯಾಲಯದ ಸಹಕಾರದೊಂದಿಗೆ ರಾಜ್ಯ ಸರ್ಕಾರ ಸಮಗ್ರ ಸಾಂಸ್ಕೃತಿಕ ಇತಿಹಾಸ ರಚಿಸಬೇಕಿದೆ ಎಂದು ಸರ್ವಾಧ್ಯಕ್ಷೆ ಡಾ.ವಿಜಯಾದೇವಿ ತಿಳಿಸಿದರು.
ನಿಕಟಪೂರ್ವ ಸಮ್ಮೇಳನ ಅಧ್ಯಕ್ಷೆ ವಿಜಯಾ ಶ್ರೀಧರ್, ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ವಿಪಕ್ಷ ನಾಯಕ ಯೋಗೇಶ್, ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ, ಎಂ.ಎನ್.ಸುಂದರ್ ರಾಜ್, ರುದ್ರಮುನಿ ಸಜ್ಜನ್, ಜಿ.ಪಿ.ಸಂಪತ್, ಎಸ್.ಪಿ.ದಿನೇಶ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಇದಕ್ಕೂ ಮೊದಲು ಗೋಪಾಳ ವೃತ್ತದಿಂದ ಸಭಾ ಭವನದವರೆಗೆ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ವಿಜಯಾದೇವಿ ಅವರ ಮೆರವಣಿಗೆ ನಡೆಸಲಾಯಿತು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200