SHIVAMOGGA LIVE NEWS
SHIMOGA | ಮಹಾನಗರ ಪಾಲಿಕೆ ನೂತನ ಮೇಯರ್, ಉಪ ಮೇಯರ್ (MAYOR – DEPUTY MAYOR) ಚುನಾವಣೆಗೆ ದಿನಾಂಕ ಘೋಷಿಸಲಾಗಿದೆ. ಅ.28ರಂದು ಚುನಾವಣೆ ನಿಗದಿಗೊಳಿಸಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಆದೇಶಿಸಿದ್ದಾರೆ.
ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿಯ ಅಭ್ಯರ್ಥಿ ಮತ್ತು ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ಎ ವರ್ಗದ ಮಹಿಳಾ ಅಭ್ಯರ್ಥಿ ಸ್ಪರ್ಧಿಸಬಹುದಾಗಿದೆ.
(MAYOR – DEPUTY MAYOR)
ನಾಮಪತ್ರ ಸಲ್ಲಿಕೆ, ಪರಿಶೀಲನೆ, ಚುನಾವಣೆ
ಅ.28ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆವರೆಗೆ ಅಕಾಂಕ್ಷಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದೆ. ಮಧ್ಯಾಹ್ನ 3 ಗಂಟೆಗೆ ಪಾಲಿಕೆ ಸಭಾಂಗಣದಲ್ಲಿ ಸಭೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆ, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅವಕಾಶವಿರಲಿದೆ. ಚುನಾವಣೆ ಅಗತ್ಯವಿದ್ದರೆ ಮತದಾನ ನಡೆಯಲಿದೆ. ಸದಸ್ಯರು ಕೈ ಎತ್ತುವ ಮೂಲಕ ತಮ್ಮ ಮತದಾನ ಮಾಡಬಹುದಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಮೈಸೂರು – ಶಿವಮೊಗ್ಗ – ತಾಳಗುಪ್ಪ ಮಧ್ಯೆ ಎಷ್ಟು ರೈಲುಗಳು ಸಂಚರಿಸುತ್ತಿವೆ? ಟೈಮಿಂಗ್ ಏನು?
ಮೇಯರ್, ಉಪ ಮೇಯರ್ ಆಯ್ಕೆ ಸಂಬಂಧ ಈ ಹಿಂದೆ ಮೀಸಲು ಪ್ರಕಟವಾಗಿ, ಚುನಾವಣೆ ದಿನಾಂಕವು ನಿಗದಿಯಾಗಿತ್ತು. ಆದರೆ ರೋಸ್ಟರ್ ಪದ್ಧತಿಯಂತೆ ಮೀಸಲಾತಿ ನಿಗದಿಯಾಗಿಲ್ಲ ಎಂದು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಯಿತು. ಹೈಕೋರ್ಟ್ ಆದೇಶದ ಮೇರೆಗೆ ಮೇಯರ್ ಸ್ಥಾನದ ಮೀಸಲಾತಿ ಬದಲಾಗಿದೆ. ಆ ಬಳಿಕ ಪ್ರಾದೇಶಿಕ ಆಯುಕ್ತರು ಚುನಾವಣೆ ನಿಗದಿಪಡಿಸಿದ್ದಾರೆ.
MAYOR – DEPUTY MAYOR
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.