ಶಿವಮೊಗ್ಗ: ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (ಶಿಮುಲ್) ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. ಕಳೆದ ಸಾಲಿನಲ್ಲಿ ಶಿಮುಲ್ (Milk Union) ಗಳಿಸಿದ ಲಾಭ, ವಹಿವಾಟು ಕುರಿತು ಮಾಹಿತಿ ನೀಡಲಾಯಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅಧ್ಯಕ್ಷರು ಏನೆಲ್ಲ ಹೇಳಿದರು?
ಸಭೆಯಲ್ಲಿ ಮಾತನಾಡಿದ ಶಿಮುಲ್ ಅಧ್ಯಕ್ಷ ಹೆಚ್.ಎನ್.ವಿದ್ಯಾಧರ ನಿವ್ವಳ ಲಾಭದ ಕುರಿತು ಮಾಹಿತಿ ನೀಡಿದರು.
- ಶಿಮುಲ್ ₹11.39 ಕೋಟಿ ನಿವ್ವಳ ಲಾಭ ಗಳಿಸಿದೆ. ನಿಯಮಾನುಸಾರ ಸದಸ್ಯ ಸಂಘಗಳಿಗೆ ಬೋನಸ್ ಹಾಗೂ ಡಿವಿಡೆಂಡ್ ಕೊಡಲಾಗುವುದು ಎಂದರು.
- ಒಕ್ಕೂಟದಲ್ಲಿ ನಿತ್ಯ 8.50 ಲಕ್ಷ ಲೀಟರ್ ಉತ್ತಮ ಗುಣಮಟ್ಟದ ಹಾಲಿನ ಶೇಖರಣೆಗೆ ನೆರವಾಗುತ್ತಿರುವ ಹಾಲು ಉತ್ಪಾದಕ ರೈತರಿಗೆ, ಸಂಘಗಳ ಕಾರ್ಯಕಾರಿ ಮಂಡಳಿ ಸದಸ್ಯರಿಗೆ, ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರು, ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದರು.
ಈ ವರ್ಷದ ಯೋಜನೆಗಳೇನು?
ಒಕ್ಕೂಟವು 2025-26 ನೇ ಸಾಲಿಗೆ ಹಮ್ಮಿಕೊಂಡಿರುವ ಕಾರ್ಯ ಚಟುವಟಿಕೆ ಹಾಗೂ ಯೋಜನೆಯ ವಿವರಗಳನ್ನು ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಸಭೆಗೆ ಮಂಡಿಸಿದರು.
2025-26ನೇ ಸಾಲಿನಲ್ಲಿ ಒಕ್ಕೂಟದಿಂದ ಸದಸ್ಯ ಸಂಘಗಳಿಗೆ/ ಉತ್ಪಾದಕರಿಗೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪಶು ಆಹಾರ ಮತ್ತು ಮೇವು ಅಭಿವೃದ್ಧಿ ಕಾರ್ಯಕ್ರಮ, ಕೃತಕಾ ಗರ್ಭಧಾರಣಾ ಕಾರ್ಯಕ್ರಮ, ಪಶು ಆರೋಗ್ಯ ಶಿಬಿರ, ತರಬೇತಿ/ ಶಿಬಿರ, ಸಹಕಾರ ಸೇವಾ ಹಾಗೂ ಶುದ್ಧ ಹಾಲು ಉತ್ಪಾದನಾ ಕಾರ್ಯಕ್ರಮ, ಮಾರುಕಟ್ಟೆ ಅಭಿವೃದ್ಧಿಗೆ ಪ್ರೋತ್ಸಾಹ ಧನ ನೀಡಲು ಹಾಗೂ ಪರಿಕರಗಳಿಗೆ ₹4.25 ಕೋಟಿ ಅನುದಾನ ನೀಡಲು ಯೋಜಿಸಲಾಗಿದೆ. ಶೇಖರಿಸುವ ಪ್ರತಿ ಕೆ.ಜಿ ಹಾಲಿಗೆ ₹1.49 ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತಾವಿತ ಹೊಸ ಯೋಜನೆಗಳು
- ತಡಗಣಿ ಶೀತಲೀಕರಣ ಕೇಂದ್ರದಲ್ಲಿ ₹1.99 ಕೋಟಿ ವೆಚ್ಚದಲ್ಲಿ ರೈತರ ಸಭಾಂಗಣ, ಹಾರ್ಡ್ ಪಾರ್ಕ್ ನಿರ್ಮಾಣ
- ಶಿವಮೊಗ್ಗ ಡೇರಿಗೆ ₹70 ಲಕ್ಷ ವೆಚ್ಚದಲ್ಲಿ 100 ಮೆ.ಟನ್ ಸಾಮರ್ಥ್ಯದ ಉಗ್ರಾಣ, ₹70 ಲಕ್ಷ ವೆಚ್ಚದಲ್ಲಿ ತರಬೇತಿ ಸಭಾಂಗಣ.
.
- ಹೊನ್ನಾಳಿ ಶೀತಲೀಕರಣ ಕೇಂದ್ರದಲ್ಲಿ ₹30 ಲಕ್ಷ ವೆಚ್ಚದಲ್ಲಿ ರೈತರ ಸಭಾಂಗಣ ನಿರ್ಮಾಣ
- ದಾವಣಗೆರೆ ತಾಲ್ಲೂಕು ಎಚ್.ಕಲಪನಹಳ್ಳಿ ಬಳಿ 14 ಎಕರೆಯಲ್ಲಿ ₹280 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ನಿತ್ಯ 5 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೇರಿ ನಿರ್ಮಾಣ.
- ₹ 22 ಕೋಟಿ ವೆಚ್ಚದಲ್ಲಿ ಶಿವಮೊಗ್ಗ ಡೇರಿಯಲ್ಲಿ ಪ್ರತ್ಯೇಕವಾಗಿ ಸಿಹಿ ಉತ್ಪನ್ನಗಳ ಉತ್ಪಾದನಾ ಘಟಕ.
- ಚಿತ್ರದುರ್ಗ ಜಿಲ್ಲೆಯಲ್ಲಿ ನಿತ್ಯ 2 ಲಕ್ಷ ಲೀಟರ್ ಸಾಮರ್ಥ್ಯದ ಸುಸಜ್ಜಿತ ಹಾಲು ಶೀಥಲೀಕರಣ ಕೇಂದ್ರ ನಿರ್ಮಾಣ
ಸಂಘಗಳಿಗೆ ಬಹುಮಾನ ವಿತರಣೆ
ಶಿಮುಲ್ ವ್ಯಾಪ್ತಿಯಲ್ಲಿ ಚಾಂಪಿಯನ್ ಸಂಘವಾಗಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಹಾಗೂ ಅತ್ಯುತ್ತಮ ಮಹಿಳಾ ಚಾಂಪಿಯನ್ ಸಂಘವಾಗಿ ಶಿಕಾರಿಪುರ ತಾಲ್ಲೂಕಿನ ಬೇಗೂರು ಹಾಲು ಉತ್ಪಾದಕರ ಸಂಘವನ್ನು ಹಾಗೂ ಅತ್ಯುತ್ತಮ ಬಿ.ಎಂ.ಸಿ ಆಗಿ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಸಂಘಗಳು ಆಯ್ಕೆಯಾಗಿದ್ದು, ಬಹುಮಾನ ವಿತರಿಸಲಾಯಿತು.
ಇದನ್ನೂ ಓದಿ » ಶಿವಮೊಗ್ಗ ಅರಮನೆಯಲ್ಲಿ ಇದೇ ಮೊದಲು ಬೊಂಬೆ ಪ್ರದರ್ಶನ, ಫೋಟೊ, ಪೇಂಟಿಂಗ್‌ಗೆ ಜಿಲ್ಲಾಧಿಕಾರಿ ಫಿದಾ
ಶಿಮುಲ್ ಉಪಾಧ್ಯಕ್ಷ ಚೇತನ್ ಎಸ್.ನಾಡಿಗರ, ನಿರ್ದೇಶಕರಾದ ಆರ್.ಎಂ.ಮಂಜುನಾಥ ಗೌಡ, ಹೆಚ್.ಬಿ.ದಿನೇಶ್, ಡಿ.ಆನಂದ, ಜಗದೀಶಪ್ಪ ಬಣಕಾರ್, ಟಿ.ಶಿವಶಂಕರಪ್ಪ, ಹೆಚ್.ಕೆ.ಬಸಪ್ಪ, ಬಿ.ಜಿ.ಬಸವರಾಜಪ್ಪ, ಬಿ.ಆರ್.ರವಿಕುಮಾರ್, ಬಿ.ಸಿ.ಸಂಜೀವ ಮೂರ್ತಿ, ಟಿ.ಎಸ್.ದಯಾನಂದ ಗೌಡ್ರು, ಜಿ.ಬಿ.ಶೇಖರಪ್ಪ, ಬಿ.ಸಿ.ಸಂಜೀವಮೂರ್ತಿ, ನಾಮನಿರ್ದೇಶಿತ ನಿರ್ದೇಶಕ ಎಸ್.ಕುಮಾರ್, ವ್ಯವಸ್ಥಾಪಕ ಸುರೇಶ್ ಹುಳ್ಳಿ ಉಪಸ್ಥಿತರಿದ್ದರು.
Milk Union
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






