ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು ಹಾಕಿದ ಚನ್ನಸಬಪ್ಪ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 JUNE 2024

SHIMOGA : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆಯ (Resignation) ಸವಾಲು ಹಾಕಿದ್ದಾರೆ.

ಸಭೆಯಲ್ಲಿ ಶಾಸಕ ಚನ್ನಬಸಪ್ಪ, ಗೋ ಹತ್ಯೆ ನಿಷೇಧ ಕಾನೂನು ಸರಿಯಾಗಿ ಪಾಲನೆ ಆಗದಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಬಕ್ರೀದ್‌ ಹಬ್ಬದ ಸಂದರ್ಭ ಸಾವಿರಾರು ಗೋವುಗಳ ಹತ್ಯೆ ಮಾಡಲಾಯಿತು ಎಂದು ಆರೋಪಿಸಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು

ಹತ್ಯೆಯ ಬಹಳಷ್ಟು ವಿಡಿಯೊಗಳು ನನ್ನ ಮೊಬೈಲ್‌ನಲ್ಲಿವೆ. ಕಾನೂನಿಗೆ ಬೆಲೆ ಇಲ್ಲವಾ ಎಂದು ಪ್ರಶ್ನಿಸಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕಿ ಬಲ್ಕಿಶ್ ಬಾನು ಅವರು ಜಿಲ್ಲೆಯಲ್ಲಿ ಗೋ ಹತ್ಯೆ ನಡೆಯುತ್ತಿಲ್ಲ. ತಪ್ಪು ಮಾಹಿತಿ ನೀಡಬೇಡಿ ಎಂದರು. ಇದಕ್ಕೆ ಸಿಟ್ಟಿಗೆದ್ದ ಚನ್ನಬಸಪ್ಪ, ಕೈಯಲ್ಲಿದ್ದ ಮೊಬೈಲನ್ನು ಕೆಳಕ್ಕೆ ಬೀಳಿಸಿ ಶಿವಮೊಗ್ಗದಲ್ಲಿ ಗೋ ಹತ್ಯೆ ನಡೆಯುತ್ತಿಲ್ಲ ಎಂಬುದು ನಿಜವಾದಲ್ಲಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಸವಾಲು ಹಾಕಿದರು.

SN-Channabasappa-in-Shimoga-KDP-Meeting.

ನಾಲ್ಕು ವರ್ಷದಲ್ಲಿ 155 ಕೇಸ್‌

ಮಧ್ಯ ಪ್ರವೇಶಿಸಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್ ಗೋ ಹತ್ಯೆ, ಅಕ್ರಮ ಸಾಗಣೆ ಸೇರಿದಂತೆ ನಾಲ್ಕು ವರ್ಷದಲ್ಲಿ 155 ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾರ್ವಜನಿಕರಿಂದ 100ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆ ಗಮನಕ್ಕೆ ತಂದರು.

ಸಚಿವ ಮಧು ಬಂಗಾರಪ್ಪ, ಗೋವುಗಳ ಅಕ್ರಮ ಸಾಗಣೆ, ಹತ್ಯೆ ವಿಷಯದಲ್ಲಿ ಕಾನೂನು ಪಾಲನೆಗೆ ನಮ್ಮಿಂದ ಯಾವುದೇ ಅಡ್ಡಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ – ಆಗುಂಬೆ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಉಡುಪಿಯ ಕಾರು ಚಾಲಕನಿಗೆ 15 ಸಾವಿರ ರೂ. ದಂಡ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment